ಅರಕಲಗೂಡು ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಆಯೋಜಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಅರಕಲಗೂಡು: ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಅದ್ದೂರಿಯಾಗಿ ಆಚರಿಸಲಾಯಿತು.
ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಬಿ.ವಿ.ಶಿವಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡಿದ್ದಾರೆ. ಈ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದ್ದು ಪ್ರತಿವರ್ಷ ಉತ್ತಮ ದಾಖಲಾತಿ ಹೊಂದುತ್ತಿದೆ. ಇದಕ್ಕೆ ಶಿಕ್ಷಕರ ಶ್ರಮ ಕೂಡ ಹೆಚ್ಚಿನದಾಗಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ವೀರೇಶ್, ಹಿರಿಯ ಶಿಕ್ಷಕ ರೆಹ್ಮತ್‌ವುಲ್ಲಾ, ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಕರಿಭೀಮಣ್ಣ, ಚಂದ್ರಪ್ಪ, ಕಾಳೇನಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಟಿ.ಮಧುಕರ್, ಚಂದ್ರಶೇಖರ್, ಪೊನ್ನಪ್ಪ, ಶಿಕ್ಷಕರಾದ ವಿಜಯಕುಮಾರ್, ರಮೇಶ್, ಲೋಕೇಶ್, ಯೋಗೇಶ್, ಎಸ್‌ಡಿಎಂಸಿ ಸದಸ್ಯರಾದ ರಮೇಶ್, ಕರೀಗೌಡ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ಕೇಶವಮೂರ್ತಿ, ಎಚ್.ವಿ.ಮಂಜೇಗೌಡ, ಅಂಗನವಾಡಿ ಶಿಕ್ಷಕಿ ಮಂಜುಳಾ ಇತರರಿದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.