ಲೂರು ಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಇಲಾಖೆಯಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದಿಂದ ಶ್ರೇಷ್ಠ ಕೃಷಿಕ ಪ್ರಶಸ್ತಿಯ ಆಯ್ಕೆಯಾದ ಪಾಲಾಕ್ಷ ಸಿದ್ದಾಪುರ, ಶಿವಲಿಂಗಪ್ಪ ಕುಂಬಾರಹಳ್ಳಿ, ದೊಡ್ಡಯ್ಯ ಕಾಡ್ಲೂರು, ಚಂದ್ರಶೇಖರ ಬೊಮಚವಳ್ಳಿ, ನಾಗೇಶ್ ಕವಳಿಕೆರೆ ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯ ವಿಜೇತರಾದ ಬಿ.ಆರ್ ಕೃಷ್ಣೇಗೌಡ ಭಕ್ತರವಳ್ಳಿ ಅವರನ್ನು ಸನ್ಮಾನಿಸಲಾಯಿತು. 
ಹಾಸನ

ಸಾವಯವ ಕೃಷಿಯ ಅರಿವು ಮೂಡಲಿ

ಲೋಕೇಶ್ ಮನು. ಡಿ
ಆಲೂರು: ಪ್ರಸಕ್ತ ದಿನಗಳಲ್ಲಿ ಮರೆಯಾಗುತ್ತಿರುವ ಕೃಷಿ ಪದ್ಧತಿ, ಆಧುನಿಕ ಬೇಸಾಯ, ಸಾವಯವ ಕೃಷಿ ಪದ್ಧತಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಅವಶ್ಯ ಇದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಧರ್ಮಲಿಂಗಂ ತಿಳಿಸಿದರು.
ಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಇಲಾಖೆಯಲ್ಲಿ 2025-26ನೇ ಸಾಲಿನ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಹಾಗೂ ಮೀನುಗಾರಿಕೆ ಇಲಾಖೆಗಳು ಹಾಗೂ ಕೃಷಿಕ ಸಮಾಜ ಆಲೂರು ಮತ್ತು ರೈತ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೈತ ಸಮೂಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಕೃಷಿ ಚಟುವಟಿಕೆ ಕಷ್ಟದಲ್ಲಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕೃಷಿ ಪದ್ಧತಿ, ರೈತರ ಸಮಸ್ಯೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯ. ಮಕ್ಕಳಿಗೆ ಪಠ್ಯೇತರ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿನ ಬಗ್ಗೆ ಜಾಗೃತಿ ಮೂಡಿಸುವುದು ಶಿಕ್ಷಣ ಸಂಸ್ಥೆಗಳ ಕೆಲಸ ಎಂದರು.
ಹಾಸನ ಪಶು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹೇಮಂತಗೌಡ ಮಾತನಾಡಿದರು.
ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದಿಂದ ಶ್ರೇಷ್ಠ ಕೃಷಿಕ ಪ್ರಶಸ್ತಿಯ ಆಯ್ಕೆಯಾದ ಪಾಲಾಕ್ಷ ಸಿದ್ದಾಪುರ, ಶಿವಲಿಂಗಪ್ಪ ಕುಂಬಾರಹಳ್ಳಿ, ದೊಡ್ಡಯ್ಯ ಕಾಡ್ಲೂರು, ಚಂದ್ರಶೇಖರ ಬೊಮಚವಳ್ಳಿ, ನಾಗೇಶ್ ಕವಳಿಕೆರೆ ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯ ವಿಜೇತರಾದ ಬಿ.ಆರ್.ಕೃಷ್ಣೇಗೌಡ ಭಕ್ತರವಳ್ಳಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸುಬ್ರಮಣ್ಯ ಶರ್ಮ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಮೇಶ್ ಕುಮಾರ್, ಪಶುಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹೇಮಂತಗೌಡ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಕೇಶವ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಾಂತೇಗೌಡ, ರೆಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ, ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿ ಗಂಗಾಧರ್, ಕೆ.ಹೊಸಕೋಟೆ ರೈತ ಬಳಗದ ಜಯಣ್ಣ ಹೈದೂರು, ತಾಲೂಕು ಕೃಷಿಕ ಸಮಾಜದ ನಿರ್ದೇಶಕರು, ಪದಾಧಿಕಾರಿಗಳು, ಸದಸ್ಯರು, ಕೃಷಿ ಅಧಿಕಾರಿಗಳಾದ ಲಕ್ಷ್ಮೀ, ಸಂಗೀತ, ಮಾಂತೇಶ ಸೊರಟೂರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಸಹಾಯಕಿಯರು ಪಾಲ್ಗೊಂಡಿದ್ದರು.