ಹಾಸನ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ 72ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಡಿಎಸ್‌ಒ ಕಾರ್ಯಕರ್ತರು ಸಮಾವೇಶಗೊಂಡಿದ್ದರು.
- ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ ಮಾಹಿತಿ
- 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮ ವಿರೋಧಿಸಿ
ಹಾಸನ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಕ್ರಮ ವಿರೋಧಿಸಿ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ನಗರದ ಹೇಮಾವತಿ ಪ್ರತಿಮೆ ಮುಂಭಾಗ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ 72ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕರೆ ನೀಡಿತು.
ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ಕಳೆದ 71 ವರ್ಷಗಳಿಂದ ಎಐಡಿಎಸ್‌ಒ ದೇಶದಾದ್ಯಂತ ವಿದ್ಯಾರ್ಥಿ ಚಳವಳಿಗಳನ್ನು ಕಟ್ಟಿಕೊಂಡು, ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು ಎಂಬ ಧ್ಯೇಯದೊಂದಿಗೆ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿದೆ ಎಂದು ಹೇಳಿದರು.
ಕಾರ್ಯಕ್ರಮದ ಕೊನೆಯಲ್ಲಿ ಭಗತ್ ಸಿಂಗ್, ನೇತಾಜಿ, ಸಾವಿತ್ರಿಬಾಯಿ ಫುಲೆ, ಜ್ಯೋತಿಬಾಫುಲೆ ಮೊದಲಾದ ಮಹಾನ್ ವ್ಯಕ್ತಿಗಳ ಆಶಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ರಾಜ್ಯದ ವಿದ್ಯಾರ್ಥಿಗಳು ಮತ್ತು ಪಾಲಕರು ಒಂದಾಗಿ ಹೋರಾಟ ನಡೆಸಬೇಕು ಎಂದು ಎಐಡಿಎಸ್‌ಒ 72ನೇ ಸಂಸ್ಥಾಪನಾ ದಿನದ ಸಂದೇಶ ನೀಡಲಾಯಿತು.
ಜಿಲ್ಲಾ ಅಧ್ಯಕ್ಷರಾದ ಚೈತ್ರಾ, ಕಾರ್ಯದರ್ಶಿ ಸುಷ್ಮಾ, ಕಾರ್ಯಕರ್ತರಾದ ಚಂದ್ರಶೇಖರ್, ಧನಂಜಯ್ ರಾಕೇಶ್, ಶಿವಲಿಂಗ, ನಾಗೀನ ಬಾನು ಇತರರು ಇದ್ದರು.