ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ಆಯೋಜಿಸಿದ್ದ ಸುಗಮ ಸಂಗೀತ ಗಾಯನ ಕಾರ್ಯಕ್ರಮವನ್ನು ಧರ್ಮಾಧಿಕಾರಿ ವಿಜಯ ಕೇಶವ ಉದ್ಘಾಟಿಸಿದರು. ಸುಮುಖ ರಾಜು, ಜನಾರ್ದನ್, ಗಾಯಕರಾದ ಜಗದೀಶ್, ಕುಮಾರ್ ಇತರರು ಇದ್ದರು. 
ಹಾಸನ

ಶಾರದಾ ಪೀಠದಲ್ಲಿ ಸುಗಮ ಸಂಗೀತ ಗಾಯನ

ಲೋಕೇಶ್ ಮನು. ಡಿ
ಬೇಲೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ಹಾಗೂ ಶ್ರೀ ಚೆನ್ನಕೇಶವಸ್ವಾಮಿ ಹೂವಿನ ಅಲಂಕಾರಿಗಳ ಸಂಘದ ಸಹಯೋಗದೊಂದಿಗೆ ಪಟ್ಟಣದ ಶ್ರೀ ಶಾರದಾ ಪೀಠದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದ ಅಂಗವಾಗಿ ಶನಿವಾರ ಸುಗಮ ಸಂಗೀತ ಗಾಯನ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ಆಯೋಜಿಸಿದ್ದ ಸುಗಮ ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶಾರದಾ ಪೀಠದ ಮುಖ್ಯ ಧರ್ಮಾಧಿಕಾರಿ ವಿಜಯಕೇಶವ ಮಾತನಾಡಿ, ಸಂಗೀತವು ಮನುಷ್ಯರ ಮನಸ್ಸನ್ನು ಶುದ್ಧಗೊಳಿಸುವ ಶಕ್ತಿ ಹೊಂದಿದ್ದು, ಭಕ್ತಿ ಮತ್ತು ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವದ ಮಾಧ್ಯಮವಾಗಿದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಯುವ ಪೀಳಿಗೆಗೆ ನಮ್ಮ ಪರಂಪರೆ ಮತ್ತು ಮೌಲ್ಯಗಳನ್ನು ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸಮಾಜದಲ್ಲಿ ಸೌಹಾರ್ದ ಮತ್ತು ಮಾನವೀಯತೆ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ ಎಂದರು.
ದೇಶಭಕ್ತರ ಬಳಗದ ಅಧ್ಯಕ್ಷ ಡಾ.ಸಂತೋಷ್ ಮಾತನಾಡಿ, ಸುಗಮ ಸಂಗೀತದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಲ್ಲಿ ದೇಶಭಕ್ತಿ, ಸಂಸ್ಕೃತಿ ಮತ್ತು ಸಾಮಾಜಿಕ ಜಾಗೃತಿ ಜತೆಗೆ ನಮ್ಮ ಪರಂಪರೆ ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಹರೀಶ್ ಮತ್ತು ತಂಡದವರು ಸುಗಮ ಸಂಗೀತ ಗಾಯನ ಪ್ರಸ್ತುತಪಡಿಸಿದರು. ಶ್ರೀ ಚನ್ನಕೇಶಸ್ವಾಮಿ ಹೂವಿನ ಅಲಂಕಾರಿಗಳ ಸಂಘದ ಗೌರವಾಧ್ಯಕ್ಷ ಸುಮುಖ ರಾಜು, ನಿರ್ದೇಶಕ ಜನಾರ್ದನ್, ಗಾಯಕರಾದ ಜಗದೀಶ್, ಕುಮಾರ್, ಲಲಿತ್ ಕುಮಾರ್ ಇತರರಿದ್ದರು.