ಬೇಲೂರು ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಪುರುಷೋತ್ತಮ್ ಅವರು ಚನ್ನರಾಯಪಟ್ಟಣಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದಿಂದ ಸನ್ಮಾನಿಸಲಾಯಿತು. ವೀಣಾ, ಗೀತಾಂಜಲಿ, ಶ್ರುತಿ, ನಾಗರಾಜು, ಮೋಹನ್ ಇತರರಿದ್ದರು. 
ಹಾಸನ

ಉತ್ತಮ ಕೆಲಸ ಮಾಡಿದಲ್ಲಿ ಜನರ ಮನಸ್ಸಲ್ಲಿ ಉಳಿಯಲು ಸಾಧ್ಯ

ಪ್ರಮುಖ ಮುಖ್ಯಾಂಶಗಳು

  • ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಅಭಿಮತ
ಬೇಲೂರು: ಸರ್ಕಾರಿ ನೌಕರರಿಗೆ ವರ್ಗಾವಣೆ ಎಂಬುದು ಸಹಜ ಪ್ರಕ್ರಿಯೆಯಾಗಿದ್ದು ತಮ್ಮ ಕರ್ತವ್ಯದಲ್ಲಿ ಸೇವೆ ಸಲ್ಲಿಸುವಾಗ ಜನಸಾಮಾನ್ಯರಿಗೆ ಸ್ಪಂದಿಸಿ ಉತ್ತಮ ಕೆಲಸಗಳನ್ನು ಮಾಡಿದಾಗ ಮಾತ್ರ ಅವರ ನೆನಪು ಸದಾ ಉಳಿಯಲಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಪುರಷೋತ್ತಮ್, ಚನ್ನರಾಯಪಟ್ಟಣ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಗುರುವಾರ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದಿಂದ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡಿದರು. ಆಹಾರ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದ ಆಹಾರ ನಿರೀಕ್ಷಕ ಪುರುಷೋತ್ತಮ್ ಇಲಾಖೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳೊಂದಿಗೆ ಸ್ಪಂದಿಸಿ ಹಲವಾರು ಕೆಲಸಗಳನ್ನು ನಿರ್ವಹಿಸುತ್ತಿದ್ದರು. ಅವರ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿರುವುದು ಶ್ಲಾಘನೀಯ ಎಂದರು.
ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಕಾರ್ಯದರ್ಶಿ ಎನ್.ಅನಂತು ಮಾತನಾಡಿದರು. ಆಹಾರ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷೆ ವೀಣಾ, ಶಿರಸ್ತೇದಾರ್ ಗೀತಾಂಜಲಿ, ಆಹಾರ ಗೋದಾಮಿನ ವ್ಯವಸ್ಥಾಪಕಿ ಶ್ರುತಿ, ಸಂಘದ ಗೌರವಾಧ್ಯಕ್ಷ ನಾಗರಾಜು, ಖಜಾಂಚಿ ಮೋಹನ್ ಮುಖಂಡರಾದ ದಯಾನಂದ್, ಲೋಕೇಶ್, ತಿಮ್ಮೇಗೌಡ ಸೇರಿದಂತೆ ಇತರರಿದ್ದರು.