ಆಲೂರು ತಾಲೂಕಿನ ಕಣತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೋಡು ಚಾಲನೆ ನೀಡಿದರು. ಡಾ.ನಿಸಾರ್ ಾತೀಮಾ, ಹರೀಣಾಕ್ಷಿ, ಹೇಮಾವತಿ ಇತರರು ಇದ್ದರು. 
ಹಾಸನ

ಪೋಲಿಯೋಮುಕ್ತ ದೇಶವಾಗಿದೆ ಭಾರತ

ಪ್ರಮುಖ ಮುಖ್ಯಾಂಶಗಳು

  • polio-free country.
ಆಲೂರು: ಪಾಲಕರು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪಲ್ಸ್ ಪೋಲಿಯೋ ಹನಿ ಹಾಕಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೋಡು ತಿಳಿಸಿದರು.
ತಾಲೂಕಿನ ಕಣತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪೋಲಿಯೋ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಭಾರತ ಪೋಲಿಯೋ ಮುಕ್ತ ದೇಶ ಎಂಬ ಕೀರ್ತಿ ಹೊಂದಿದೆ. ಕಳೆದ ವರ್ಷವಷ್ಟೇ ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಅಧಿಕೃತವಾಗಿ ಘೋಷಿಸಿದೆ. ಆದರೂ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಅಭಿಯಾನ ಇನ್ನೂ ಮುಂದುವರಿದಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತೀಮಾ ಮಾತನಾಡಿ, ಪೋಲಿಯೋ ಬಗ್ಗೆ ಜನರಲ್ಲಿ ಜಾಗೃತಿ ಬಂದಿದ್ದು, ಮಕ್ಕಳಲ್ಲಿ ಅಂತಹ ಪ್ರಕರಣ ಕಂಡುಬಂದಿಲ್ಲ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣ, ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಶಿಕ್ಷಕಿಯರು ಹಾಗೂ ಮಹಿಳಾ ಆರೋಗ್ಯ ಸಹಾಯಕಿಯರು ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸುವ ಮೂಲಕ ಮುಂದೆ ಯಾವ ಮಗುವೂ ಪೋಲಿಯೋಗೆ ತುತ್ತಾಗದಂತೆ ಎಚ್ಚರ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಸ್.ಹರೀಣಾಕ್ಷಿ, ಕಣತೂರು ಅಂಗನವಾಡಿ ಕಾರ್ಯಕರ್ತೆ ಎಂ.ಎನ್. ಹೇಮಾವತಿ, ಆಶಾ ಕಾರ್ಯಕರ್ತೆ ಹೇಮಾವತಿ, ಮೇಲ್ವಿಚಾರಕ ರಾಜು ಇತರರು ಇದ್ದರು.