ಆಲೂರು ತಾಲ್ಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಏಖಖಿಅ ಟಿಕೆಟ್ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ
ಆಲೂರು: ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಟಿಕೆಟ್ ತಪಾಸಣಾ ಇನ್‌ಸ್ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ (57) ಮೃತ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.