ನಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾರಿ ಬಹುಮತದೊಂದಿಗೆ ಜಯಗಳಿಸಿದ್ದು, ಅಭ್ಯರ್ಥಿಗಳಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅಭಿನಂಧಿಸಿದರು. 
ಹಾಸನ

ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಜಯ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಜಯ
  • ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ
ಹಾಸನ: ತಾಲೂಕಿನ ನಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾರಿ ಬಹುಮತದೊಂದಿಗೆ ಜಯ ಗಳಿಸಿದ್ದಾರೆ.
ಗೆದ್ದಂತಹ ಅಭ್ಯರ್ಥಿಗಳಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ.ಗೌಡ ಅಭಿನಂದಿಸಿದರು. ಸಾಮಾನ್ಯ ವರ್ಗದಿಂದ ಗಂಗಾಧರ, ನಟರಾಜು, ಹುಚ್ಚೆಗೌಡ್ರು, ಮಂಜುನಾಥ್ ಮತ್ತು ಮಂಜುಶಟ್ಟಿ ಅವರು ಜಯಭೇರಿ ಬಾರಿಸಿದ್ದಾರೆ. ಮಹಿಳಾ ಮೀಸಲು ಸ್ಥಾನದಲ್ಲಿ ಪದ್ಮಾ ಹಾಗೂ ಶಾಂತಮ್ಮ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ವರ್ಗದಿಂದ ಮಲ್ಲೇಶ್, ಪ್ರವರ್ಗ: ಎ ಯಿಂದ ಪರಮೇಶಪ್ಪ, ಪ್ರವರ್ಗ: ಬಿ ಯಿಂದ ಲಿಂಗರಾಜು ಗೆಲುವು ಸಾಧಿಸಿದ್ದಾರೆ.
ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಬೆಂಬಲಿಗರು ಸಂಭ್ರಮಾಚರಣೆ ನಡೆಸಿ ಪರಸ್ಪರ ಸಿಹಿ ಹಂಚಿಕೊಂಡರು. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ.ಗೌಡ ಅಭಿನಂದನೆ ಸಲ್ಲಿಸಿ ಮಾತನಾಡಿ, ಪಕ್ಷದ ಮುಖಂಡರು, ನಿಟ್ಟೂರು ಭಾಗದ ಫಲಿತಾಂಶವು ಹಾಸನ ತಾಲೂಕಿನಲ್ಲಿ ರಾಜಕೀಯ ಗಾಳಿ ಯಾವ ದಿಕ್ಕಿನಲ್ಲಿ ಬೀಸುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ. ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು. ಗೆಲುವಿಗೆ ಶ್ರಮಿಸಿದ ಎಲ್ಲ ಹಿರಿಯ ಮುಖಂಡರಿಗೆ ಹಾಗೂ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸುವುದಾಗಿ ಹೇಳಿದರು.