ಶ್ರವಣಬೆಳಗೊಳದ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಅಫ್ತಾಬ್ ಪಾಷಾ, ಕೃಷ್ಣಮೂರ್ತಿ, ಯಾದವರಾಜ್, ರಮೇಶ್ ಗೌಡ, ಮಂಜೇಗೌಡ, ಬಿ.ಕೆ.ಸತೀಶ್, ಎ.ಜಿ.ಲೋಕೇಶ್ ಇತರರು ಇದ್ದರು.
- ಶಾಸಕ ಸಿ.ಎನ್.ಬಾಲಕೃಷ್ಣ ಮಾಹಿತಿ
- ಪ್ರತಿಭಾ ಕಾರಂಜಿ ಕಾರ್ಯಕ್ರಮ
ಶ್ರವಣಬೆಳಗೊಳ: ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರುತ್ತಿದ್ದು, ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ತಾಲೂಕಿನ ಶ್ರವಣಬೆಳಗೊಳ ಹಾಗೂ ಬಾಗೂರು ಶಾಲೆಗಳು ಆಯ್ಕೆಯಾಗಿವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 2025-26ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳಲ್ಲಿ ಕಡಿಮೆ ಇರುವ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಹೋಬಳಿ ಮಟ್ಟದಲ್ಲಿ ಪಬ್ಲಿಕ್ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ಕೊಡಲು ಈ ಯೋಜನೆ ಉತ್ತಮವಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಕೆ ಎನ್.ಅನಿಲ್ ಮಾತನಾಡಿದರು.
ಕ್ರೀಡಾಕೂಟಕ್ಕೆ ಆಗಮಿಸಿದ್ದ ಅಂಗವಿಕಲ ವಿದ್ಯಾರ್ಥಿಯನ್ನು ಅಂಗವಿಕಲರ ದಿನಾಚರಣೆ ಪ್ರಯುಕ್ತ ಗೌರವಿಸಲಾಯಿತು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಅಫ್ತಾಬ್ ಪಾಷಾ, ಸದಸ್ಯ ಕೃಷ್ಣಮೂರ್ತಿ, ತಾಲೂಕು ಪ್ರತಿಭಾ ಕಾರಂಜಿ ವ್ಯವಸ್ಥಾಪಕ ಸಮಿತಿಯ ಯಾದವರಾಜ್, ರಮೇಶ್ ಗೌಡ, ಮಂಜೇಗೌಡ, ಬಿ.ಕೆ.ಸತೀಶ್, ಎ.ಜಿ.ಲೋಕೇಶ್, ಸಣ್ಣಸ್ವಾಮಿ, ಮೋಹನ್, ಅರಿಫುಲ್ಲ ಅನ್ಸಾರಿ, ಬಾಬು ಜಾರ್ಜ್ ಇತರರು ಇದ್ದರು.