ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಆರ್ಟ್ ಆಫ್ ಗಿವಿಂಗ್ ಕಾರ್ಯಕ್ರಮದಲ್ಲಿ ಕ್ರೀಡಾ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ವಾಲಿಬಾಲ್ ಕಿಟ್ ವಿತರಣೆ ಮಾಡಲಾಯಿತು.
ಆಲೂರು: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಆರ್ಟ್ ಆಫ್ ಗೀವಿಂಗ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹಾಸನ ಜಿಲ್ಲಾ ಮೈ ಭಾರತ್ ಕೇಂದ್ರದ ಜೀವನ ಕೌಶಲ ತರಬೇತುದಾರ ಕೆ.ಟಿ ಹರೀಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಆರ್ಟ್ ಆಫ್ ಗಿವಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರ್ಟ್ ಆಫ್ ಗೀವಿಂಗ್' ಎಂಬುದು ಮಾನವೀಯತೆ, ಸಹಾನುಭೂತಿ ಮತ್ತು ಹಂಚಿಕೊಳ್ಳುವ ಗುಣವನ್ನು ಉತ್ತೇಜಿಸುವ ಒಂದು ಸಾಮಾಜಿಕ ಚಳವಳಿಯಾಗಿದೆ. ಇದರ ಉದ್ದೇಶ ಸಮಾಜದಲ್ಲಿ ಪರಸ್ಪರ ಸಹಾಯ, ಪ್ರೀತಿ, ಕರುಣೆ ಮತ್ತು ಸೇವಾ ಮನೋಭಾವವನ್ನು ಬೆಳೆಸುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಾಂಶುಪಾಲ ಟಿ.ಪಿ. ಪುಟ್ಟರಾಜು ಅವರ ಮಾತನಾಡಿ, ಆರ್ಟ್ ಆಫ್ ಗೀವಿಂಗ್ ಒಂದು ಉತ್ತಮ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ವಾಲಿಬಾಲ್ ಕಿಟ್ ಅನ್ನು ಬಳಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಸ್ವಸ್ಥ ದೇಹದಲ್ಲಿ ಸ್ವಸ್ಥ ಮನಸ್ಸಿರುತ್ತದೆ ಎಂಬ ಮಾತಿನಂತೆ ಕ್ರೀಡೆ ದೈಹಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ಎಂದರು.
ಮೈ ಭಾರತ್ ಕೇಂದ್ರದ ಜಿಲ್ಲಾ ಸಂಯೋಜಕ ಆನಂದ್, ಕಾಲೇಜಿನ ಸಹ ಪ್ರಾಧ್ಯಾಪಕ ರಮೇಶ್ ಕೆ.ಎನ್., ಕ್ರೀಡಾ ಸಂಚಾಲಕ ನಟರಾಜ್ ಜೆ.ಜಿ., ಎನ್.ಎಸ್.ಎಸ್. ಅಧಿಕಾರಿ ಡಾ.ರಾಘವೇಂದ್ರ ಪಿ.ಕೆ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.