ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ತೊಳಲು ಗ್ರಾಮದ ಮಳಲಿಕೆರೆ ಹೂಳೆತ್ತುವ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಮಂಜುಳಾ, ಸೋಮಶೇಖರ್, ವೆಂಕಟೇಶ್, ಪ್ರದೀಪ್ ಇದ್ದರು.
ಬೇಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ತೊಳಲು ಗ್ರಾಮದಲ್ಲಿ ಮಳಲಿಕೆರೆ ಹೂಳು ಎತ್ತುವ ಕಾರ್ಯಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಲವು ಯೋಜನೆಗಳನ್ನು ಹಾಕಿಕೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಕೆರೆ ಹೂಳು ತೆಗೆಯಲು ಈಗಾಗಲೇ ಭೂಮಿಪೂಜೆ ನೆರವೇರಿಸಿದ್ದೇವೆ. ಇದರಿಂದ ಕೆರೆಯಲ್ಲಿ ನೀರು ನಿಂತು ಜನ, ಜಾನುವಾರುಗಳಿಗೆ, ಕೃಷಿಗೆ ಅನುಕೂಲವಾಗುತ್ತದೆ ಎಂದರು.
ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷ ಸೋಮಶೇಖರ್ ಮಾತನಾಡಿ, ಇಲ್ಲಿಯವರೆಗೂ 951ಕ್ಕೂ ಹೆಚ್ಚು ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸಮಾಜಕ್ಕೆ ಸಂಸ್ಥೆ ಅಪಾರ ಕೊಡುಗೆ ನೀಡಿದೆ ಎಂದರು.
ತೊಳಲು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ್, ಉಡುಪಿ ಪ್ರಾದೇಶಿಕ ವಿಭಾಗದ ಇಂಜಿನಿಯರ್ ಪ್ರದೀಪ್, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ದಯಾನಂದ್, ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಸುವರ್ಣ, ಕೆರೆ ಸಮಿತಿ ಅಧ್ಯಕ್ಷ ಧರ್ಮಯ್ಯ, ಪದಾಧಿಕಾರಿಗಳಾದ ಗಂಗರಾಜು, ಮೇಲ್ವಿಚಾರಕಿ ಸವಿತಾ, ಸೇವಾ ಪ್ರತಿನಿಧಿ ರೂಪಾ, ಪ್ರತಿಭಾ, ಶಿವಣ್ಣ, ಕೃಷಿ ಮೇಲ್ವಿಚಾರಕ ನಾಗರಾಜ್ ಇದ್ದರು.