ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಹಾಸನ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಾಹಿತ್ಯ ಕಮ್ಮಟವನ್ನು ಗಣ್ಯರು ಉದ್ಘಾಟಿಸಿದರು. ಎಚ್.ಎಂ.ಮನುಕುಮಾರ್, ಎಂ.ಬಿ.ಗಿರಿಜಾಂಬಿಕಾ, ಎಸ್.ಉಪ್ಪಾರ್ ಇತರರಿದ್ದರು.
ಹಾಸನ: ಸಾಹಿತ್ಯ ಕಮ್ಮಟಗಳು ಮಕ್ಕಳಲ್ಲಿ ಉತ್ತಮ ಸಂಸ್ಕಾರ ವೃದ್ಧಿಸುವುದರ ಜತೆಗೆ ಚಿಂತನಾಶೀಲತೆ, ತಾರ್ಕಿಕತೆ, ಸೃಜನಶೀಲತೆ ಹೆಚ್ಚಿಸುತ್ತವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಚ್.ಎಂ.ಮನುಕುಮಾರ್ ಅಭಿಪ್ರಾಯಪಟ್ಟರು.
ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಹಾಸನ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಾಹಿತ್ಯ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ್ ಸ್ಕೌಟ್ಸ್ ಗೈಡ್ಸ್ ಮಕ್ಕಳಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನುಂಟು ಮಾಡುವ ನಿಟ್ಟಿನಲ್ಲಿ ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮುಖೇನ ನಿರಂತರವಾಗಿ ಕಾರ್ಯೋನ್ಮುಖವಾಗಿದೆ. ಇಲ್ಲಿ ಜೀವನ ಮೌಲ್ಯಗಳನ್ನು ಕಲಿಸಲಾಗುತ್ತದೆ ಎಂದರು.
ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಉಪಾಧ್ಯಕ್ಷೆ ಎಂ.ಬಿ.ಗಿರಿಜಾಂಬಿಕಾ ಮಾತನಾಡಿ, ಮಕ್ಕಳು ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಕಲೆ, ಸಾಹಿತ್ಯ, ರಂಗಭೂಮಿ, ಸಂಗೀತ, ಕ್ರೀಡೆ ಹೀಗೆ ವಿಭಿನ್ನ ಆಯಾಮಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ರಾಷ್ಟ್ರ ಹಾಗೂ ರಾಜ್ಯ ಸಂಸ್ಥೆ ನಿರಂತರವಾಗಿ ಕಾರ್ಯೋನ್ಮುಖವಾಗಿದೆ ಎಂದರು.
ಶಿಬಿರದ ನಾಯಕ ಸಾಹಿತಿ ಕೊಟ್ರೇಶ್ ಎಸ್.ಉಪ್ಪಾರ್, ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಸ್ಟೀಫನ್ ಪ್ರಕಾಶ್, ಗೈಡ್ ಆಯುಕ್ತೆ ಜಯಾ ರಮೇಶ್, ಜಿಲ್ಲಾ ಖಜಾಂಚಿ ಆರ್.ಎಸ್.ರಮೇಶ್, ಕೇಂದ್ರ ಸ್ಥಾನಿಕ ಆಯುಕ್ತ ಡಾ.ಜಿ.ಡಿ.ನಾರಾಯಣ, ಜಂಟಿ ಕಾರ್ಯದರ್ಶಿ ಸೋಫಿಯಾ ಫರ್ನಾಂಡೀಸ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕಾ, ಸಂಪನ್ಮೂಲ ವ್ಯಕ್ತಿ ರಂಗಕರ್ಮಿ ಜಯಶಂಕರ್ ಬೆಳಗುಂಬ, ಹಿರಿಯ ಗೈಡರ್ ಎಚ್.ಜಿ. ಕಾಂಚನಮಾಲ, ಫ್ಲಾಕ್ ಲೀಡರ್ ಕೆ.ಸಿ.ಗೀತಾ, ಪ್ರೇಮ ಸ್ಟೀಫನ್ ಪ್ರಕಾಶ್ ಇತರರಿದ್ದರು.