ಅರಕಲಗೂಡು ತಾಲೂಕು ಕೊಣನೂರಿನ ಉಳ್ಳೇನಹಳ್ಳಿಯ ನಳಂದ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಕ್ಕಳು ಶ್ರೀಕೃಷ್ಣ, ರಾಧೆಯರ ವೇಷಭೂಷಣ ಧರಿಸಿ ಗಮನ ಸೆಳೆದರು. ಸಕೀನಾ, ದಿವ್ಯಾ, ಮಿಸ್ರಿಯ, ಅರ್ಪಿತಾ, ನಿಖತ್ ಇದ್ದರು.  
ಹಾಸನ

ಶ್ರೀಕೃಷ್ಣ- ರಾಧೆ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು

ಅರಕಲಗೂಡು: ಕೊಣನೂರಿನ ಉಳ್ಳೇನಹಳ್ಳಿಯ ನಳಂದ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶ್ರೀಕೃಷ್ಣನ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶ್ರೀಕೃಷ್ಣ, ರಾಧೆ ಹಾಗೂ ಗೋಪಿಕೆಯರ ವೇಷಭೂಷಣ ಧರಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳ ವೇಷಭೂಷಣ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು.
ಶ್ರೀಕೃಷ್ಣನ ಜೀವನ ಚರಿತ್ರೆ ಹಾಗೂ ಭಗವದ್ಗೀತೆಯ ಸಂದೇಶ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಭಜನೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಗಮನ ಸೆಳೆದರು.
ಶಿಕ್ಷಕರು ಶ್ರೀಕೃಷ್ಣನ ಆದರ್ಶಗಳು, ಧರ್ಮ, ಸತ್ಯ ಹಾಗೂ ಸದಾಚಾರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಆವರಣದಲ್ಲಿ ನಡೆದ ಆಚರಣೆಯು ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಅರಿವು ಮೂಡಿಸಿದರು.
ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಸಕೀನಾ, ಸಹ ಶಿಕ್ಷಕರಾದ ದಿವ್ಯಾ, ಮಿಸ್ರಿಯ, ಅರ್ಪಿತಾ, ನಿಖತ್ ಇದ್ದರು.