ಮಲ್ಲಿಕಾರ್ಜುನ  
ಹಾಸನ

11ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಆಲೂರು: ಹಾಸನ ಲೋಕಾಯುಕ್ತ ಕಚೇರಿಯಿಂದ 458ನೇ ತಾಲೂಕು ಮಟ್ಟದ ಜನಸಂಪರ್ಕ ಸಭೆಯನ್ನು ಫೆ. 11ರಂದು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಆಲೂರು ತಾಲೂಕು ಆಡಳಿತ ಸೌಧದ ಕಚೇರಿ ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ಲೋಕಾಯುಕ್ತ ಪೊಲೀಸ್ ನಿರೀಕ್ಷಕಿ ಕೆ.ಶಿಲ್ಪಾ ಭಾಗವಹಿಸಲಿದ್ದಾರೆ. ಆಲೂರು ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ತಪ್ಪದೆ ಹಾಜರಿರುವಂತೆ ತಹಸೀಲ್ದಾರ್ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಇಲಾಖೆ ಅಧಿಕಾರಿಗಳು ಕೈಗೊಂಡ ಕ್ರಮಗಳ ಕುರಿತು ಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಇರುವುದರಿಂದ ತಪ್ಪದೇ ಭಾಗವಹಿಸಬಹುದು ಎಂದಿದ್ದಾರೆ.