ಮೃತ ಮಂಜುಶೆಟ್ಟಿ  
ಹಾಸನ

ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತ

ಪ್ರಮುಖ ಮುಖ್ಯಾಂಶಗಳು

  • hit by car

ಚನ್ನರಾಯಪಟ್ಟಣ: ರಾಷ್ಟ್ರೀಯ ಹೆದ್ದಾರಿ-75ರ ಬಂಡಿಹಳ್ಳಿ ಗೇಟ್ ಸಮೀಪ ಶನಿವಾರ ರಾತ್ರಿ ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಬಂಡಿಹಳ್ಳಿ ಗ್ರಾಮದ ನಿವಾಸಿ ಮಂಜ ಶೆಟ್ಟಿ (70) ಮೃತರು. ಜಮೀನಿನ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಂಜಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.