ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಎಪಿಎಂಸಿಯಲ್ಲಿ ಸ್ಥಾಪಿಸಿರುವ ರಾಗಿ ಖರೀದಿ ಕೇಂದ್ರದಲ್ಲಿ ಪೂಜೆ ಸಲ್ಲಿಸುವ ಮೂಲಕ ಶಾಸಕ ಸ್ವರೂಪ್ ಪ್ರಕಾಶ್ ಖರೀದಿಗೆ ಚಾಲನೆ ನೀಡಿದರು. 
ಹಾಸನ

ರಾಗಿ ಖರೀದಿ ಕೇಂದ್ರ ಆರಂಭ

ಪ್ರಮುಖ ಮುಖ್ಯಾಂಶಗಳು

  • ರಾಗಿ ಖರೀದಿ ಕೇಂದ್ರ ಆರಂಭ
  • ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ
ಹಾಸನ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಎಪಿಎಂಸಿಯಲ್ಲಿ ಸ್ಥಾಪಿಸಿರುವ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.
ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ರೈತರು ಬೆಳೆದ ಭತ್ತ ಹಾಗೂ ರಾಗಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ರಾಗಿ ಪ್ರತಿ ಕ್ವಿಂಟಾಲ್‌ಗೆ 4,880 ರೂ., ಭತ್ತಕ್ಕೆ 2,360 ರೂ., ಕನಿಷ್ಠ ಬೆಲೆ ನಿಗದಿ ಮಾಡಿ ಖರೀದಿ ಮಾಡಲಾಗುತ್ತಿದೆ ಎಂದರು.
ಹಾಸನ ತಾಲೂಕಿನಲ್ಲಿ 1,220 ರೈತರು ನೋಂದಾಯಿಸಿಕೊಂಡಿದ್ದಾರೆ. ಅದರಂತೆ ಇನ್ನುಳಿದ ರೈತರು ಕೂಡ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ತಾವು ಬೆಳೆದ ಭತ್ತ ರಾಗಿ ಬೆಳೆಗಳನ್ನು ಇಲ್ಲಿ ತಂದು ಮಾರಾಟ ಮಾಡಬೇಕು ಎಂದು ಮನವಿ ಮಾಡಿದರು.
ರೈತರಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ನೇರವಾಗಿ ಖರೀದಿ ಮಾಡಿ ಸರ್ಕಾರದಿಂದ ನೀಡುತ್ತಿರುವ ಅನ್ನಭಾಗ್ಯ ಯೋಜನೆಗೆ ಬಳಸಿಕೊಳ್ಳಲಾಗುತ್ತದೆ. ಇದರಿಂದ ರೈತರಿಗೂ ಅನುಕೂಲವಾಗುತ್ತದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.