ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿ ಭವಿಷ್ ಅವರನ್ನು ಶಾಸಕ ಸಿಮೆಂಟ್ ಮಂಜು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. 
ಹಾಸನ

ವಿದ್ಯಾರ್ಥಿಯ ಆರೋಗ್ಯ ವಿಚಾರಿಸಿದ ಶಾಸಕ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • MLA inquired
ಸಕಲೇಶಪುರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಟ್ಟಣದ ಬಾಳೆಗದ್ದೆ ನಿವಾಸಿ ಹೇಮಂತ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಭವಿಷ್ ಅವರನ್ನು ಶಾಸಕ ಸಿಮೆಂಟ್ ಮಂಜು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ವೈದ್ಯರಿಂದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದ ಶಾಸಕ, ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಬುಧವಾರ ರಾತ್ರಿ ಬಾಳೆಗದ್ದೆ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯ ಅಜ್ಜ ಸಿದ್ದರಾಜು ಅವರು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ಇದೇ ವೇಳೆ ಆ ಮಾರ್ಗವಾಗಿ ತೆರಳುತ್ತಿದ್ದ ಶಾಸಕ ಸಿಮೆಂಟ್ ಮಂಜು ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ದೊರಕುವಂತೆ ವ್ಯವಸ್ಥೆ ಮಾಡಿದ್ದರು.