ತಾಲೂಕಿನ ಅಡಗೂರು-ತಿರುಮನಹಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಮರಗಳು ಹಾಗೂ ಬೆಳೆ ನಷ್ಟ ಸಂಭವಿಸಿದ ಸ್ಥಳಕ್ಕೆ ಶಾಸಕ ಎಚ್.ಕೆ.ಸುರೇಶ್ ಭೇಟಿ ನೀಡಿ ಪರಿಶೀಲಿಸಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕಾಂತರಾಜು, ಹೇಮಂತ್, ಕಂದಾಯ ಇಲಾಖೆಯ ರವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮಲೆಕ್ಕಾಧಿಕಾರಿ ಗ್ರಾಮಸ್ಥರು ಇದ್ದರು.
- ಮಳೆ ಹಾನಿ ಪ್ರದೇಶಕ್ಕೆ ಶಾಸಕ ಭೇಟಿ
- ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ
ಬೇಲೂರು: ತಾಲೂಕಿನ ಅಡಗೂರು-ತಿರುಮನಹಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಮರಗಳು ಹಾಗೂ ಬೆಳೆ ನಷ್ಟ ಸಂಭವಿಸಿದ ಸ್ಥಳಕ್ಕೆ ಶಾಸಕ ಎಚ್.ಕೆ.ಸುರೇಶ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಶಾಸಕರು, ಗುರುವಾರ ಸುರಿದ ಅಕಾಲಿಕ ಮಳೆಯಿಂದ ತಾಲೂಕಿನ ಸಾಕಷ್ಟು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ಮತ್ತು ಬೆಳೆ ನಾಶವಾಗಿದೆ. ಅಡಗೂರು ಭಾಗದಲ್ಲಿ ತೆಂಗಿನ ಮರಗಳು ಬಿದ್ದಿವೆ ಹಾಗೂ ಫಸಲು ಹಾಳಾಗಿದೆ. ಜತೆಗೆ 25ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸಿಹಿ ಕುಂಬಳಕಾಯಿ ನಾಶವಾಗಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ. ಈ ಬಗ್ಗೆ ಕೃಷಿ, ತೋಟಗಾರಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಆದಷ್ಟು ಬೇಗ ಬೆಳೆ ನಷ್ಟ ಸಂಭವಿಸಿದವರಿಗೆ ಇಲಾಖೆಯಿಂದ ಸಿಗುವ ಪರಿಹಾರವನ್ನು ಕೊಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ರೈತರು ಸಹ ಮಳೆ ಸಂದರ್ಭ ಜಾಗೃತಿ ವಹಿಸಿದರೆ ಅನುಕೂಲವಾಗುತ್ತದೆ ಎಂದರು.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕಾಂತರಾಜು, ಹೇಮಂತ್, ಕಂದಾಯ ಇಲಾಖೆಯ ರವಿನ್ಯೂ ಇನ್‌ಸ್ಪೆಕ್ಟರ್, ಗ್ರಾಮಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರಿದ್ದರು.