ಚನ್ನರಾಯಪಟ್ಟಣ ತಾಲೂಕು ಬರಗೂರು ಬೀರಲಿಂಗೇಶ್ವರ ದೇವಾಲಯದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಮುಖಂಡರಾದ ಶಶಿಧರ್, ಶಂಕರ್, ರವಿ ಇತರರಿದ್ದರು. 
ಹಾಸನ

ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಚನ್ನರಾಯಪಟ್ಟಣ : ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದರು. ತಾಲೂಕಿನ ಬರಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಶ್ರೀ ಬೀರಲಿಂಗೇಶ್ವರಸ್ವಾಮಿ ದೇವಾಲಯದ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಚಿಕ್ಕ ಕರಡೇವಿನಿಂದ ಹೆರಗು ರಸ್ತೆ ನಿರ್ಮಾಣ ಕಾಮಗಾರಿಗೆ 2 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದೆ. ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಗ್ರಾಮೀಣ ಭಾಗದ ಶಾಲಾ ಕೊಠಡಿಗಳು, ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ರಸ್ತೆ ಅಭಿವೃದ್ಧಿಗೆ ಸಂಸದರ ಅನುದಾನದಲ್ಲಿ ಆದ್ಯತೆ ನೀಡಲಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲಾಗುವುದು ಎಂದು ಅವರು ಹೇಳಿದರು. ಮುಖಂಡರಾದ ಶಶಿಧರ್, ಶಂಕರ್, ರವಿ ಇತರರಿದ್ದರು.