ಗಂಡಸಿ ಸಮೀಪದ ಚಗಚಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಗಂಡಸಿ: ಇಲ್ಲಿನ ಚಗಚಗೆರೆ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ವಿವಿಧ ಬಗೆಯ ಪುಷ್ಪ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೆಳ್ಳಿ ರಥದ ಮೇಲೆ ಕೆಂಪೇಗೌಡರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ನಂತರ ಜರುಗಿದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಕ ಶಿವಸ್ವಾಮಿ, ದೂರದೃಷ್ಟಿಯ ನಾಯಕ ಕೆಂಪೇಗೌಡರ ಕಲ್ಪನೆಗೂ ಮೀರಿ ಇಂದು ಬೆಂಗಳೂರು ಬೆಳೆದಿದ್ದರೂ ಅದಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಎಲ್ಲ ಜನಾಂಗದವರಿಗೂ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿ ಮಾದರಿ ಕಾರ್ಯ ಮಾಡಿದ್ದರು.
ರೈತಾಪಿ ವರ್ಗದ ಜನತೆಯ ಅನುಕೂಲಕ್ಕಾಗಿ ಬೆಂಗಳೂರು ಸುತ್ತಮುತ್ತ ಕೆರೆಕಟ್ಟೆಗಳನ್ನು ನಿರ್ಮಿಸಿದರು. ಅವರ ದೂರದೃಷ್ಟಿಯ ಲದಿಂದಲೇ ಇಂದು ಬೆಂಗಳೂರು ಉದ್ಯಾನನಗರಿಯೂ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀವಿನಾಯಕ ಗೆಳೆಯರ ಬಳಗದ ಸದಸ್ಯರು, ಗ್ರಾಮದ ಮುಖಂಡರು ಭಾಗವಹಿಸಿದ್ದರು.
ರಾತ್ರಿ 9 ಗಂಟೆಗೆ ಮಡೆನೂರು ಮನು ಮತ್ತು ತಂಡದವರಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.