ಅರಕಲಗೂಡು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು. ಧನಲಕ್ಷ್ಮೀ, ನರಸೇಗೌಡ, ಕೃಷ್ಣೇಗೌಡ ಇತರರಿದ್ದರು.  
ಹಾಸನ

ಗ್ರಾಮದ ಅಭಿವೃದ್ಧಿಗೆ ಅಗತ್ಯ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಂ. ಮಂಜು ಹೇಳೀಕೆ

ಅರಕಲಗೂಡು:

ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಗ್ರಾಮದ ಬಹುದಿನಗಳ ಬೇಡಿಕೆಯಂತೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರಿಗೆ ಉತ್ತಮ ರಸ್ತೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮದ ದೇವಸ್ಥಾನದ ಅಭಿವೃದ್ಧಿಗಾಗಿ 5 ಲಕ್ಷ ರೂ., ಅನುದಾನ ನೀಡಲಾಗಿದೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳಲ್ಲಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.
ಈಪಂ ಇಂಜಿನಿಯರ್ ಧನಲಕ್ಷ್ಮೀ, ಮುಖಂಡರಾದ ನರಸೇಗೌಡ, ಕೃಷ್ಣೇಗೌಡ ಹಾಗೂ ಗ್ರಾಮಸ್ಥರು ಇದ್ದರು.