ಹಾಸನ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಕೃಷ್ಣಬೈರೇಗೌಡ ಮಾತನಾಡಿದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾಇತರರು ಇದ್ದರು.  
ಹಾಸನ

ಲೋಪವಾಗದಂತೆ ಸಿಎಂ ಕಾರ್ಯಕ್ರಮ ಆಯೋಜಿಸಿ

ಪ್ರಸಿನ್ ಕೆ.ಆರ್

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚನೆ
  • ಪೂರ್ವಭಾವಿ ಸಭೆ
ಹಾಸನ: ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು. ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುವುದರ ಮೂಲಕ ಸಹಕರಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿ ಅವರು ಡಿ.6 ರಂದು ಹಾಸನಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮ, ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ವೇದಿಕೆಯ ಕಾರ್ಯಕ್ರಮ 11 ಗಂಟೆಗೆ ಪ್ರಾರಂಭ ಮಾಡಲೇಬೇಕು. 2.30 ಕ್ಕೆ ಕಾರ್ಯಕ್ರಮ ಮುಗಿಯಬೇಕು. ಸಂಬಂಧಪಟ್ಟ ವಿಎ ಮತ್ತು ಪಿಡಿಒಗಳು ತಾವು ಕರೆತಂದ ಫಲಾನುಭವಿಗಳನ್ನು ಕಾರ್ಯಕ್ರಮದ ನಂತರ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಕೈಯಲ್ಲಿ ದಾಖಲೆಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ ಆದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ. ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ. 14 ವರ್ಷದಲ್ಲಿ 2444 ರೈತರಿಗೆ ಪೋಡಿ ದುರಸ್ತು ಮಾಡಿಕೊಡಲಾಗಿದೆ. ಆದರೆ, 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ. ಇದರಲ್ಲಿ 10 ಸಾವಿರ ಆರ್‌ಟಿಸಿ ಆಗಿದೆ. ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್‌ಟಿಸಿ ಮಾಡಲಾಗುವುದು ಎಂದರು.
ಅರಸೀಕೆರೆಯಲ್ಲಿ 94ಡಿ 1000 ಜನಕ್ಕೆ ಹಕ್ಕುಪತ್ರ ಹಾಗೂ ಸಕಲೇಶಪುರದಲ್ಲಿ 94ಸಿಯಲ್ಲಿ 500 ಜನರಿಗೆ ಎಲ್ಲ ತಾಲೂಕು ಸೇರಿದಂತೆ 3000 ಜನರಿಗೆ ನೀಡುವುದರಿಂದ 25 ಸಾವಿರ ಕುಟುಂಬಗಳಿಗೆ ಕೆಲಸ ಮಾಡಿಕೊಡಲಾಗಿದೆ. ಕನಿಷ್ಠ 1 ಪೋಡಿ ಮಾಡಿಕೊಟ್ಟರೆ 3 ಕುಟುಂಬಗಳಿಗೆ 30 ರಿಂದ 60 ವರ್ಷದ ಹಿಂದಿನ ಜಮೀನುಗಳಿಗೆ ಪೋಡಿ ಮಾಡಿ ಕೊಡುವುದರಿಂದ ಇರುತ್ತದೆ. ಮೂಲ ಮಂಜೂರುದಾರರು ಕೆಲವರು ಮೃತಪಟ್ಟಿದ್ದಾರೆ. ಆದರೆ, ವಾರಸುದಾರರಿಗೆ ಇದರಿಂದ ಕನಿಷ್ಠ 2 ಕುಟುಂಬಗಳು ಅಂದರೆ 25 ಸಾವಿರ ಪೋಡಿ ಮಾಡಿದರೆ 50 ರಿಂದ 60 ಸಾವಿರ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಅವರ ಮಕ್ಕಳು, ಮೊಮ್ಮಕ್ಕಳಿಗೆ ಜಮೀನು
ಸಂಸದ ಶ್ರೇಯಸ್ ಪಟೇಲ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಸಚಿವರ ಆಪ್ತ ಕಾರ್ಯದರ್ಶಿ ರವಿ ತಿಮ್ಮಾಪುರ ಇತರರು ಇದ್ದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ರಾಜೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.