ಹಾಸನ ನಗರದ ಆರ್.ಸಿ.ರಸ್ತೆ ಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕಿ ಡಾ.ಡಿ.ಎಸ್. ಪ್ರತಿಮಾ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದರು. 
ಹಾಸನ

ಸರ್ಕಾರಿ ಮಹಿಳಾ ಕಾಲೇಜಿಗೆ ಪ್ರತಿಮಾ ಭೇಟಿ

ಪ್ರಮುಖ ಮುಖ್ಯಾಂಶಗಳು

  • Government Women's College
ಹಾಸನ: ನಗರದ ಆರ್.ಸಿ.ರಸ್ತೆ ಗಂಧದ ಕೋಠಿ ಆವರಣದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕಿ ಡಾ.ಡಿ.ಎಸ್.ಪ್ರತಿಮಾ ಇತ್ತೀಚೆಗೆ ದಿಢೀರ್ ಭೇಟಿ ಕಾಲೇಜಿನ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದರು.
ಇದೇ ವೇಳೆ ತರಗತಿಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡರು. ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ಸಂಬಂಧಿಸಿದಂತೆ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಅವರಿಂದ ಮಾಹಿತಿ ಪಡೆದರು. ಪ್ರತಿ ವರ್ಷ ಪ್ರವೇಶಾತಿಯನ್ನು ಉತ್ತಮಪಡಿಸುವುದು ಸೇರಿದಂತೆ, ತರಗತಿಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಹೋಗುವಂತೆ ಸೂಚಿಸಿದರು. ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ಇದ್ದರು.