ಯೋಗ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು. ಡಾ. ಅನುರಾಧಾ, ಶ್ರೀಧತ್ ಕಂಕನವಾಡಿ, ಸತೀಶ್ ಕುಮಾರ್ ಇತರರು ಇದ್ದರು. 
ಹಾಸನ

ಯೋಗ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • yoga-day
ಬೇಲೂರು: ಪಟ್ಟಣದಲ್ಲಿ ಜೂ.21ರಂದು ಏರ್ಪಡಿಸಿರುವ ಯೋಗ ದಿನಾಚರಣೆಗೆ ಕೇಂದ್ರ ಸಚಿವರೊಬ್ಬರು ಆಗಮಿಸುವ ನಿರೀಕ್ಷೆ ಇದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅದ್ದೂರಿಯಾಗಿ ಮತ್ತು ಅರ್ಥ ಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆ ಕೈಗೊಳ್ಳಬೇಕೆಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಸೋಮವಾರ ಕರೆಯಲಾಗಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.21 ಭಾನುವಾರ ವಿಶ್ವ ಯೋಗ ದಿನಾಚರಣೆಯನ್ನು ಶ್ರೀಚನ್ನಕೇಶವಸ್ವಾಮಿ ದೇವಾಲಯದ ಒಳ ಆವರಣದಲ್ಲಿ ಆಚರಿಸಲು ಸಿದ್ದತೆ ಕೈಗೊಳ್ಳಬೇಕು. ಕಳೆದ ಎರಡು ವರ್ಷ ಹಳೇಬೀಡಿನಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಗೆ ಕೇಂದ್ರ ಸಚಿವರು ಆಗಮಿಸಿದ್ದರು. ಈ ಬಾರಿಯೂ ಬೇಲೂರಿನಲ್ಲಿ ನಡೆಯಲಿರುವ ದಿನಾಚರಣೆಗೆ ಕೇಂದ್ರ ಸಚಿವರು ಭಾಗವಹಿಸುತ್ತಾರೆ ಎಂಬ ಮಾಹಿತಿ ಇದ್ದು, ಅಚ್ಚುಕಟ್ಟಾಗಿ ಎಲ್ಲ ವ್ಯವಸ್ಥೆ ಮಾಡಬೇಕು. ಅಲ್ಲದೆ ಈ ದಿನಾಚರಣೆಯಂದು ಪಟ್ಟಣದ ವಿವಿಧ ಶಾಲೆಗಳಿಂದ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕೇವಲ ವಿದ್ಯಾರ್ಥಿಗಳು, ಅಧಿಕಾರಿಗಳು ಮಾತ್ರ ಭಾಗವಹಿಸಿದರೆ ಸಾಲದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೈ ಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಬಂದವರಿಗೆ ಬೆಳಗಿನ ಉಪಹಾರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪುರಸಭೆ ಮತ್ತು ದೇವಾಲಯದ ಆಡಳಿತ ಮಂಡಳಿಯವರು ಮಾಡಲಿದ್ದಾರೆ. ಜತೆಗೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದು ಸಮಸ್ಯೆಯಾದವರಿಗೆ ಚಿಕಿತ್ಸೆ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಿಂದ ಪಾಕಿರ್ಂಗ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಆಯುಷ್ ವೈದ್ಯಾಧಿಕಾರಿ ಡಾ.ಅನುರಾಧಾ ಮಾತನಾಡಿ, ಬೇಲೂರಿನಲ್ಲಿ ಜರುಗಲಿರುವ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾ ಆಯುಷ್ ಕೇಂದ್ರದ ಹಿರಿಯ ಅಧಿಕಾರಿಗಳು ನೀಡಿದ್ದು. ಇದರ ಅಂಗವಾಗಿ ಆಯುಷ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು, ತಾಲೂಕು ಆಡಳಿತದಿಂದ ಎಲ್ಲ ವ್ಯವಸ್ಥೆ ಕೈಗೊಂಡು ಯೋಗ ದಿನಾಚರಣೆ ಆಚರಿಸಲು ಕ್ರಮ ಕೈಗೊಳ್ಳಬೇಕಿದೆ ಎಂದರು.
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ತಾಪಂ ಇಒ ಸತೀಶ್ ಕುಮಾರ್, ಬಿಇಒ ಭಾಗ್ಯಮ್ಮ, ಜಿಪಂ ಕುಡಿಯುವ ನೀರು ಸರಬರಾಜು ವಿಭಾಗದ ಎಇಇ ಅನ್ವರ್ ಭಾಷಾ, ಪಿಎಸ್‌ಐ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ, ದೇಗುಲದ ಇಒ ಯೋಗೀಶ್ ಸೇರಿದಂತೆ ಯೋಗ ಶಿಕ್ಷಕರಿದ್ದರು.