ಅರಕಲಗೂಡು ತಾಲೂಕಿನ ಮಡಕೆ ಹೊಸಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಶನಿವಾರ ಭೂಮಿಪೂಜೆ ನೆರವೇರಿಸಿದರು. ನರೇಗೌಡ, ಗ್ರಾಮಸ್ಥರು ಇದ್ದರು.
- infrastructure development
ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ಮಡಕೆ ಹೊಸಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಶನಿವಾರ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಗ್ರಾಮಸ್ಥರು, ರೈತರು ಹಾಗೂ ವಾಹನ ಸವಾರರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮಳೆಗಾಲದಲ್ಲಿ ರಸ್ತೆ ಹದಗೆಟ್ಟು ಉಂಟಾಗುತ್ತಿದ್ದ ತೊಂದರೆಗೂ ಪರಿಹಾರ ದೊರೆಯಲಿದೆ. ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಕೈಗೊಂಡು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಮಾಜಿ ಅಧ್ಯಕ್ಷ ನರೇಗೌಡ, ಗ್ರಾಮಸ್ಥರು ಇದ್ದರು.