ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ ಅಂಗವಾಗಿ ಸಾಗುತ್ತಿದ್ದ ಮೆರವಣಿಗೆ ಮೇಲೆ ಚಪ್ಪಲಿ ಎಸೆತ ಹಾಗೂ ಕಲ್ಲು ದೂರಿದ ಪ್ರಕರಣ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
- ಚಪ್ಪಲಿ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ
- ಶಿವಾಜಿ ಮಹಾರಾಜರ ಜಯಂತಿ ಉತ್ಸವ ಮೆರವಣಿಗೆ ಮೇಲೆ ಚಪ್ಪಲಿ ಎಸೆತ
ಹಾಸನ: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ ಮೆರವಣಿಗೆ ಮೇಲೆ ಚಪ್ಪಲಿ ಎಸೆತ ಹಾಗೂ ಕಲ್ಲು ತೂರಿದ ಪ್ರಕರಣ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮ ಸೇನೆ ಕಾರ್ಯಕರ್ತರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಧರ್ಮನಾಯಕ್ ಮಾತನಾಡಿ, ಶಿವಾಜಿ ಜಯಂತಿ ಮೆರವಣಿಗೆ ವೇಳೆ ಬಾಗಲಕೋಟೆಯಲ್ಲಿ ನಡೆದಿರುವ ಘಟನೆ ಸಹಿಸಲಾಗದು. ಶಾಂತಿಯುತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಚಪ್ಪಲಿ ಹಾಗೂ ಕಲ್ಲು ಎಸೆದಿರುವ ಜಿಹಾದಿಗಳ ಮನಸ್ಥಿತಿಯನ್ನು ಖಂಡಿಸಿದರು.
ಶಾಂತಿಯುತವಾಗಿರುವ ಸಮಾಜದ ಸ್ವಾಸ್ಥೃ ಹಾಳು ಮಾಡುವ ನಿಟ್ಟಿನಲ್ಲಿ ಕೆಲ ಜಿಹಾದಿಗಳು ನಡೆದುಕೊಂಡಿದ್ದಾರೆ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.