ಅರಕಲಗೂಡಿನಲ್ಲಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು. ಭುವನೇಶ್, ಹೊಂಬೇಗೌಡ ಇತರರಿದ್ದರು. 
ಹಾಸನ

ಉತ್ತಮ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಒದಗಿಸಿ

ಅರಕಲಗೂಡು: ಕೃಷಿಗೆ ಉತ್ತಮ ಬೀಜ, ರಸಗೊಬ್ಬರ ಒದಗಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಭುವನೇಶ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆಗೆ ಮಂಗಳವಾರ ತೆರಳಿ ತಾಂತ್ರಿಕ ಅಧಿಕಾರಿ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ತಾಲೂಕಿನ ಕೆಲವೆಡೆ ಮಳೆ ಆರಂಭವಾಗಿದೆ. ಮುಂದಿನ ಮುಂಗಾರು ಹಂಗಾಮಿಗೆ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಒದಗಿಸಬೇಕು. ಇದರಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದರು.
ತಾಲೂಕು ರೈತ ಸಂಘದ ಮಾಜಿ ಅಧ್ಯಕ್ಷ ಹೊಂಬೇಗೌಡ, ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಇದ್ದರು.