ತರಿಗಳಲೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣ, ಸಾರ್ವಜನಿಕ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ
ಅರಕಲಗೂಡು: ಗ್ರಾಮ ಪಂಚಾಯತಿ ಸದಸ್ಯರು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿ, ಸೌಕರ್ಯಗಳನ್ನು ಒದಗಿಸಲು ಒತ್ತು ನೀಡಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು.
ತಾಲೂಕಿನ ತರಿಗಳಲೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣ, ಸಾರ್ವಜನಿಕ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಅನುದಾನ ಕೊರತೆಯಲ್ಲೂ ಸಂಪನ್ಮೂಲ ಕ್ರೋಢಿಕರಿಸಿ ಮಾದರಿ ಕಟ್ಟಡ ನಿರ್ಮಾಣ ಮಾಡಿರುವ ಸದಸ್ಯರು ಮತ್ತು ಅಧ್ಯಕ್ಷ ಶ್ರೀನಿವಾಸ್ ಅವರನ್ನು ಅಭಿನಂದಿಸಿ, ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಪಡೆಯುವ ಸದಸ್ಯ ಮತ್ತು ಅಧ್ಯಕ್ಷರು ಸ್ವಾರ್ಥ ಬಿಟ್ಟು ಮಹದಾಸೆಯನ್ನಿಟ್ಟುಕೊಂಡು ಕೆಲಸ ಮಾಡಿದಾಗ ಇಅಧ್ಬುತ ಕಾರ್ಯಗಳು ಸಾಧ್ಯವೆಂದು ಅಭಿಪ್ರಾಯಪಟ್ಟರು.
ಹಾಸನ ಆದಿಚುಂಚನಗಿರಿ ಮಠದ ಶ್ರೀ ಶಂಭುನಾಥಸ್ವಾಮೀಜಿ ಆಶೀರ್ವಚನ ನೀಡಿ, ಗ್ರಾಮಗಳ ಉದ್ಧಾರಕ್ಕೆ ಗ್ರಾಮ ಪಂಚಾಯಿತಿಗಳು ಅಡಿಗಲ್ಲಾಗುತ್ತವೆ. ವಿದ್ಯಾವಂತರು ಅಧಿಕಾರ ಪಡೆದು ನಿಸ್ವಾರ್ಥದಿಂದ ಕೆಲಸ ಮಾಡಿದಾಗ ಇಂತಹ ಅಪರೂಪದ ಕೆಲಸಗಳು ಕಾಣಸಿಗುತ್ತವೆ ಎಂದರು.
ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ರಾಜಕಾರಣವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಉದ್ದೇಶವನ್ನೇ ಮೂಲವಾಗಿಟ್ಟುಕೊಳ್ಳುವವರ ಪೈಕಿ ಹಳ್ಳಿಯಲ್ಲಿಯೂ ಆಸಕ್ತಿಯುಳ್ಳ ರಾಜಕಾರಣಿಗಳಿರುವುದು ವಿಶೇಷದ ಸಂಗತಿ ಎಂದರು.
ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಹಾರಂಗಿ ಮಹಾಮಂಡಳದ ಅಧ್ಯಕ್ಷ ಎಸ್.ಸಿ.ಚೌಡೇಗೌಡ, ಮುಖಂಡ ರಾಜೇಗೌಡ, ಕೃಷ್ಣೇಗೌಡ, ಪುಟ್ಟಸ್ವಾಮಿಗೌಡ ಇತರರಿದ್ದರು.