ಅರಕಲಗೂಡು ತಾಲೂಕು ರಾಮನಾಥಪುರದ ಶ್ರೀ ರಾಮೇಶ್ವರ ರಥೋತ್ಸವದಲ್ಲಿ ಭಕ್ತರು ತೇರು ಎಳೆದು ಸಂಭ್ರಮಿಸಿದರು. 
ಹಾಸನ

ರಾಮೇಶ್ವರ ರಥೋತ್ಸವ ಅದ್ದೂರಿ

ಅರಕಲಗೂಡು: ತಾಲೂಕಿನ ರಾಮನಾಥಪುರದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯದ ರಥೋತ್ಸವ ಸೋಮವಾರ ಸಡಗರದಿಂದ ನೆರವೇರಿತು.
ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ವಿವಿಧ ಪೂಜಾ ವಿಧಾನಗಳು ವಿಧಿವತ್ತಾಗಿ ನಡೆದವು. ದೇಗುಲವನ್ನು ಆಕರ್ಷಕ ರೀತಿಯ ಹೂಗಳಿಂದ ಅಲಂಕೃತಗೊಳಿಸಲಾಗಿತ್ತು. ಮಧ್ಯಾಹ್ನ ಶುಭ ಮುಹೂರ್ತದಲ್ಲಿ ದೇಗುಲದ ಮುಂಭಾಗ ವಿವಿಧ ಪುಷ್ಪಗಳಿಂದ ಹಾಗೂ ಬಗೆಬಗೆಯ ಬಣ್ಣದ ಬಟ್ಟೆಗಳಿಂದ ಅಲಂಕರಿಸಿದ 30 ಅಡಿ ಎತ್ತರದ ರಥದಲ್ಲಿ ದೇವರ ಉತ್ಸವ ಮೂರ್ತಿಯನ್ನು ಕೂರಿಸಿ, ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಮಂಗಳವಾದ್ಯ, ವಿವಿಧ ಜನಪದ ಕಲಾತಂಡಗಳೊಂದಿಗೆ ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಅಪಾರ ಭಕ್ತರ ಸಮಯದಲ್ಲಿ ಹರ್ಷೋದ್ಗಾರದೊಂದಿಗೆ ಸಾಮೂಹಿಕವಾಗಿ ರಥವನ್ನು ಎಳೆಯುತ್ತಾ ದೇವಸ್ಥಾನದ ಮುಂಭಾಗದಿಂದ ರಥದ ಬೀದಿಯಲ್ಲಿ ತೆರಳಿ ಅಲ್ಲಿಂದ ಮತ್ತೆ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ನಿಲ್ಲಿಸಿದರು. ದೇವಸ್ಥಾನದಲ್ಲಿ ಭಕ್ತರು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.