ಅರಕಲಗೂಡು ತಾಲೂಕು ಲಕ್ಕೂರು ಗ್ರಾಮಸ್ಥರು ಶುಕ್ರವಾರ ಕೊಣನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮದ್ಯ ಅಕ್ರಮ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. 
ಹಾಸನ

ಮದ್ಯ ಅಕ್ರಮ ಮಾರಾಟ ತಡೆಗೆ ಒತ್ತಾಯ

ಲಲಾಟಾಕ್ಷ ಎಸ್
ಅರಕಲಗೂಡು: ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಕೊಣನೂರು ಪೊಲೀಸ್ ಠಾಣೆಗೆ ತೆರಳಿದ ಗ್ರಾಮಸ್ಥರು ಶುಕ್ರವಾರ ಪೊಲೀಸರಿಗೆ ಮನವಿ ಸಲ್ಲಿಸಿದರು.
ಗ್ರಾಪಂ ಸದಸ್ಯ ಹಿರಣ್ಯ ಮಾತನಾಡಿ, ಲಕ್ಕೂರು ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ಸಾಗಿದೆ. ಕೆಲ ಮನೆಗಳು ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಪರಿಣಾಮ ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಿದ್ದು ರೈತರು, ಬಡವರು, ಕೂಲಿ ಕಾರ್ಮಿಕರು ದುಡಿದ ಹಣವನ್ನೆಲ್ಲ ಮದ್ಯ ಸೇವನೆಗೆ ವ್ಯಯಿಸುತ್ತಿದ್ದಾರೆ. ಮನೆಗಳಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ. ಕ್ರಮಕ್ಕೆ ಮುಂದಾಗದಿದ್ದರೆ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.