ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸ್ಥಾಪನೆಯಾದ ನೂತನ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ಶಾಸಕ ಎ. ಮಂಜು ಉದ್ಘಾಟಿಸಿದರು. ಉಳ್ಳಾಗಡ್ಡಿ, ನಾಗರಾಜು, ಸೋಮು ಇತರರಿದ್ದರು. 
ಹಾಸನ

ಗ್ರಾಮೀಣ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಅಗತ್ಯ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ. ಮಂಜು ಹೇಳಿಕೆ
  • ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆ

ಅರಕಲಗೂಡು:

ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಯಾವುದೇ ಆರ್ಥಿಕ ಅಥವಾ ವಸತಿ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಎ. ಮಂಜು ಹೇಳಿದರು.

ತಾಲೂಕಿನ ಕೊಣನೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ನೂತನ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ದೂರದ ಗ್ರಾಮಗಳಿಂದ ಬಂದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಉತ್ತಮ ವಸತಿ ಸೌಲಭ್ಯ ದೊರೆಯುವುದರಿಂದ ಶಿಕ್ಷಣ ಮುಂದುವರಿಸಲು ಅನುಕೂಲವಾಗಲಿದೆ. ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬಿಸಿಎಂ ಇಲಾಖೆಯ ವಿದ್ಯಾರ್ಥಿ ನಿಲಯವು ಮಹತ್ವದ ಸೌಲಭ್ಯವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಳ್ಳಾಗಡ್ಡಿ, ಮುಖಂಡರಾದ ನಾಗರಾಜು, ಸೋಮು, ಇಮ್ರಾನ್, ವಾರ್ಡನ್ ನೇತ್ರಾವತಿ, ಉಮೇಶ್, ಅಜಿತ್ ಕುಮಾರ್ ಇತರರಿದ್ದರು.