ಕೃಷಿ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ನಿಖಿಲ್ ಅವರನ್ನು ಶಾಸಕ ಸಿಮೆಂಟ್ ಮಂಜು ಅಭಿನಂದಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಕಾರ್ಯದರ್ಶಿ ಸೋಮಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಕುಮಾರ್, ಮುಖಂಡರಾದ ರಾಜ್‌ಕುಮಾರ್, ರಾಜಶೇಖರ್ ಮತ್ತಿತರರಿದ್ದರು. 
ಹಾಸನ

ಮಾತಿನಲ್ಲಿ ಬದ್ಧತೆ ಹೊಂದಿದ್ದರೆ ರಾಜಕೀಯ ಉನ್ನತಿ

ಸಕಲೇಶಪುರ: ಮಾತಿನಲ್ಲಿ ಬದ್ಧತೆ ಹೊಂದಿರುವ ವ್ಯಕ್ತಿ ರಾಜಕೀಯವಾಗಿ ಉನ್ನತ ಸ್ಥಾನಕ್ಕೆ ಏರಲಿದ್ದಾನೆ ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿಖಿಲ್ ಅವರಿಗೆ ಬುಧವಾರ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಕಳೆದ ವರ್ಷದ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದ ಮಧು ಅವರ ನಡುವೆ ನಡೆದಿದ್ದ ಮಾತುಕತೆ ಒಡಂಬಡಿಕೆಯಂತೆ ತಮ್ಮ ಸ್ಥಾನವನ್ನು ತೆರವು ಮಾಡಿದ್ದು, ಆ ಸ್ಥಾನಕ್ಕೆ ನಿಖಿಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಬೆಳವಣಿಗೆ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲು ಸಹಕಾರಿಯಾಗಲಿದೆ. ರಾಜಕೀಯದಲ್ಲಿ ನಂಬಿಕೆಯೇ ಪ್ರಧಾನ ಅಂಶವಾಗಿದ್ದು, ನಂಬಿಕೆ ಕಳೆದುಕೊಳ್ಳುವ ವ್ಯಕ್ತಿಯನ್ನು ಜನರು ಎಂದಿಗೂ ಕ್ಷಮಿಸಲಾರರು ಎಂದರು.