ಕೊಣನೂರು ಪಿಎಂಶ್ರೀ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಕೆ.ಪಿ. ನಾರಾಯಣ, ಮಲ್ಲಿಕಾರ್ಜುನ, ಮೋಹನ್ ಕುಮಾರ್, ದೇವರಾಜು ಇತರರಿದ್ದರು.  
ಹಾಸನ

ಮಹಿಳೆಯರ ಶಿಕ್ಷಣಕ್ಕಾಗಿ ಶ್ರಮಿಸಿದ್ದ ಸಾವಿತ್ರಿಬಾಯಿ ಫುಲೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ.ಮಂಜು
  • ಕೊಣನೂರು ಪಿಎಂಶ್ರೀ ಶಾಲೆ
  • ಕೊಣನೂರು ಮತ್ತು ರಾಮನಾಥಪುರ ಹೋಬಳಿಯ ಗುರುವಂದನಾ ಕಾರ್ಯಕ್ರಮ
ಅರಕಲಗೂಡು: ಸಮಾಜಕ್ಕೆ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಅವರ ಮುಂದಿನ ಜೀವನವನ್ನು ಶಿಕ್ಷಕರು ಉತ್ತಮವಾಗಿ ರೂಪಿಸುವಂತಾಗಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.
ತಾಲೂಕಿನ ಕೊಣನೂರು ಪಿಎಂಶ್ರೀ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೊಣನೂರು ಮತ್ತು ರಾಮನಾಥಪುರ ಹೋಬಳಿಯ ಗುರುವಂದನಾ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ದೇಶದ ನಿರ್ಮಾಣಕ್ಕಾಗಿ ಉನ್ನತ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ದಿಟ್ಟ ಮಹಿಳೆ, ಅವರ ಆದರ್ಶಗಳನ್ನು ಪಾಲಿಸುವಂತೆ ಶಿಕ್ಷಕರಿಗೆ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಲ್ಲಿಕಾರ್ಜುನ, ಕೇಶವಮೂರ್ತಿ, ಮೋಹನ್ ಕುಮಾರ್, ದೇವರಾಜು, ಸದಾಶಿವ, ಮಂಜೇಗೌಡ ಇತರರಿದ್ದರು.