ಎಸ್‌ಐಆರ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಮತದಾನದ ಸಾಂವಿಧಾನಿಕ ಹಕ್ಕನ್ನು ಕಾಪಾಡಲು ಸಿಪಿಐಎಂ ಮತ್ತು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದವರು ಹಲವು ಸಲಹೆ ನೀಡಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಎಚ್.ಆರ್.ನವೀನ್‌ಕುಮಾರ್, ಧರ್ಮೇಶ್, ಆರ್.ಪಿ.ವೆಂಕಟೇಶ್ ಮೂರ್ತಿ, ರಾಜಶೇಖರ ಹುಲಿಕಲ್, ಎಂ.ಸಿ ಡೋಂಗ್ರೆ, ಎಂ.ಜಿ.ಪೃಥ್ವಿ ಇತರರಿದ್ದರು.
- ಎಸ್‌ಐಆರ್ ಸರಳಗೊಳಿಸಿ, ಮತದಾರರ ಹಕ್ಕು ಕಾಪಾಡಿ
- ವಿವಿಧ ಸಂಘಟನೆಗಳಿಂದ ಜಿಲ್ಲಾಡಳಿತಕ್ಕೆ ಮನವಿ
ಹಾಸನ: ಎಸ್‌ಐಆರ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಮತದಾನದ ಸಾಂವಿಧಾನಿಕ ಹಕ್ಕನ್ನು ಕಾಪಾಡಲು ಸಿಪಿಐಎಂ ಮತ್ತು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಹಲವು ಸಲಹೆ ನೀಡಿ ಇತ್ತೀಚೆಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಎಲ್ಲ ನಾಗರಿಕರ ಮತದಾನದ ಹಕ್ಕು ರಕ್ಷಿಸಬೇಕು. ದಾಖಲೆಗಳ ಕೊರತೆಯಿಂದ ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ತೆಗೆಯದಂತೆ ಅಗತ್ಯ ಕ್ರಮವಹಿಸಬೇಕು. ಚುನಾವಣಾ ಆಯೋಗ ನಿಗದಿಪಡಿಸಿರುವ 11 ದಾಖಲೆ ಪೈಕಿ ಒಂದು ದಾಖಲೆಯನ್ನೂ ಒದಗಿಸಲು ಸಾಧ್ಯವಿಲ್ಲವೋ ಅಂತಹವರಿಗೆ, ಜನನ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಕಾಯಂ ವಾಸ ದೃಢೀಕರಣ ಪತ್ರ, ಇತ್ಯಾದಿ ಅಗತ್ಯ ದಾಖಲೆ ಪಡೆದುಕೊಳ್ಳಲು ಸಾಧ್ಯವಾಗುವಂತೆ ನಿಯಮಗಳನ್ನು ಸರಳಗೊಳಿಸಬೇಕು ಎಂದು ಮನವಿ ಮಾಡಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್.ಆರ್.ನವೀನ್‌ಕುಮಾರ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶ್‌ಮೂರ್ತಿ, ಹಿರಿಯ ದಲಿತ ಮುಖಂಡ ರಾಜಶೇಖರ ಹುಲಿಕಲ್, ಸಿಪಿಐನ ಎಂ.ಸಿ ಡೋಂಗ್ರೆ, ಎಂ.ಜಿ.ಪೃಥ್ವಿ, ಅತೀಕ್ ಉರ್ ರೆಹಮಾನ್, ರಾಜು ಗೊರೂರು, ಟಿಪ್ಪು ಸಂಘರ್ಷ ಸಮಿತಿಯ ಮುಬಷಿರ್ ಅಹಮದ್ ಇತರರಿದ್ದರು.