ಮಗ್ಗೆ ವೈಯನ್ಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಅಮ್ಮನಿಗೆ ಶುಕ್ರವಾರ ವಿಶೇಷ ಅಲಂಕಾರ ಮಾಡಿರುವುದು.  
ಹಾಸನ

ಬನಶಂಕರಿ ದೇಗುಲದಲ್ಲಿ ವಿಶೇಷ ಪೂಜೆ

ನಾಗೇಶ ಎಸ್
ಆಲೂರು: ತಾಲೂಕಿನ ಮಗ್ಗೆ ಗ್ರಾಮ ಪಂಚಾಯಿತಿಯ ವೈ.ಎನ್ ಪುರದಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ನಡೆದು, ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ತಾಲೂಕಿನ ಪ್ರಮುಖ ದೇವಿ ದೇವಾಲಯಗಳಲ್ಲಿ ಶ್ರೀ ಬನಶಂಕರಿ ದೇಗುಲ ಹೆಚ್ಚು ಪ್ರಾಧಾನ್ಯತೆಯನ್ನು ಪಡೆದುಕೊಂಡಿದೆ. ಬನಶಂಕರಿ ದೇವಾಲಯದಲ್ಲಿ ನಡೆಯುವ ಪೂಜಾ ಕೈಂಕರ್ಯಗಳು ಬಹಳ ವಿಶೇಷವಾಗಿದ್ದು, ಈ ಭಾಗದ ಭಕ್ತರು ತಪ್ಪದೇ ದೇವಿಯ ದರ್ಶನ ಪಡೆದು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮುಂದುವರಿಸುತ್ತಾ ಹೋಗುತ್ತಿರುವುದು ಇಲ್ಲಿಯ ವಿಶೇಷವಾಗಿದೆ.