ಅರಕಲಗೂಡು ತಾಲೂಕಿನ ಅಂಕನಾಯಕನಹಳ್ಳಿ ಕಾವಲು ಗ್ರಾಮದಲ್ಲಿ ಶನಿವಾರ ಉದ್ಘಾಟನೆಯಾದ ಶ್ರೀ ಹೊಳೆಯಮ್ಮ ದೇವಿ ದೇವಾಲಯದಲ್ಲಿ ಶಾಸಕ ಎ.ಮಂಜು, ಭಕ್ತರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. 
ಹಾಸನ

ಹೊಳೆಯಮ್ಮ ದೇವಿ ದೇಗುಲದಲ್ಲಿ ವಿಶೇಷ ಪೂಜೆ

ಪ್ರಮುಖ ಮುಖ್ಯಾಂಶಗಳು

  • Special puja
ಅರಕಲಗೂಡು: ತಾಲೂಕಿನ ಅಂಕನಾಯಕನಹಳ್ಳಿ ಕಾವಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಹೊಳೆಯಮ್ಮ ದೇವಿ ದೇವಾಲಯವನ್ನು ಶನಿವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಹೋಮ-ಹವನ, ಕುಂಭಾಭಿಷೇಕ ಹಾಗೂ ದೇವಿ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಜರುಗಿದವು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯ ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮಹಿಳೆಯರು ಪೂರ್ಣಕುಂಭದೊಂದಿಗೆ ಮೆರವಣಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಭಾಗವಹಿಸಿ ದೇವರ ದರ್ಶನ ಪಡೆದರು. ಗ್ರಾಮಸ್ಥರ ಸಹಕಾರದಿಂದ ದೇವಾಲಯ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಶ್ರೀಹೊಳೆಯಮ್ಮ ದೇವಿಯ ಆಶೀರ್ವಾದದಿಂದ ಗ್ರಾಮದ ಜನರಿಗೆ ಸುಖ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸಿದರು.
ಭಕ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ದಿನವಿಡೀ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.