ನಗರದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಸ್ವರೂಪ್ ಪ್ರಕಾಶ್, ಡಿಸಿ ಲತಾ ಕುಮಾರಿ, ಶಾಸಕ ಸಿ.ಎನ್.ಬಾಲಕೃಷ್ಣ, ಬಿ.ಪಿ.ಕೃಷ್ಣೇಗೌಡ, ಎಸ್ಪಿ ಶುಭಾನ್ವಿತಾ, ಜಗದೀಶ್ ಗಂಗಣ್ಣನವರ್ ಇದ್ದರು. 
ಹಾಸನ

ಒತ್ತಡದಿಂದ ದೂರ ಇರಲು ಕ್ರೀಡಾಕೂಟ ಸಹಕಾರಿ

ಪ್ರಮುಖ ಮುಖ್ಯಾಂಶಗಳು

  • ಒತ್ತಡದಿಂದ ದೂರ ಇರಲು ಕ್ರೀಡಾಕೂಟ ಸಹಕಾರಿ
  • ಶಾಸಕ ಸ್ವರೂಪ್ ಪ್ರಕಾಶ್ ಅಭಿಮತ
  • ರಾಜ್ಯ ಸರ್ಕಾರಿ ನೌಕರರ ಸಂಘದ ಸ ಹಯೋಗ
ಹಾಸನ: ಸರ್ಕಾರಿ ನೌಕರರು ನಿತ್ಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸದ ಒತ್ತಡದಿಂದ ದೂರ ಇರಲು ಕ್ರೀಡಾಕೂಟಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಸ್ವರೂಪ್ ಪ್ರಕಾಶ್ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸ ಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ನೌಕರರು ಕೆಲಸದ ಜತೆಗೆ ಆರೋಗ್ಯ ಹಾಗೂ ಕುಟುಂಬದವರಿಗೂ ಹೆಚ್ಚು ಒತ್ತು ನೀಡಬೇಕು. ಈ ಬಾರಿ 3500ಕ್ಕೂ ಹೆಚ್ಚು ನೌಕರರು ನೋಂದಣಿ ಮಾಡಿಕೊಂಡಿರುವುದು ಸಂತೋಷದ ವಿಷಯ ಎಂದರು.
ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮಾತನಾಡಿ, ನಿರಂತವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವವರು ಆರೋಗ್ಯವಾಗಿರುತ್ತಾರೆ. ಕ್ರೀಡೆಗೆ ವಯಸ್ಸಿನ ಭೇದವಿಲ್ಲ ಎಂದರು.
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಶಾಸಕಾಂಗ ಮತ್ತು ಕಾರ್ಯಾಂಗ ನಾಣ್ಯದ ಎರಡು ಮುಖಗಳು. ಸರ್ಕಾರಿ ನೌಕರರು ದೈಹಿಕ, ಮಾನಸಿಕ ಒತ್ತಡದಿಂದ ದೂರವಿರಲು ಕ್ರೀಡೆ ಮುಖ್ಯ ಎಂದು ತಿಳಿಸಿದರು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, ಶಾಸಕಾಂಗ ಹಾಗೂ ಕಾರ್ಯಾಂಗ ಒಗ್ಗಟ್ಟಾಗಿ ಕೆಲಸವನ್ನು ಮಾಡಿದರೆ ಜನತೆಗೆ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ.ಕೃಷ್ಣೇಗೌಡ ಮಾತನಾಡಿ, ಪ್ರತಿಯೊಬ್ಬರೂ ಗೆಲುವು ಮತ್ತು ಸೋಲನ್ನು ಒಂದೇ ಮನಸ್ಸಿನಲ್ಲಿ ಸ್ವೀಕರಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಆರ್.ಕೆಂಚೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್.ಮಲ್ಲೇಶ್ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಇತರರಿದ್ದರು.