ಹೊಳೆನರಸೀಪುರ ಪಟ್ಟಣದ ಕೋರ್ಟ್ ಆವರಣದಲ್ಲಿ ಹಮ್ಮಿಕೊಂಡಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಚೇತನಾ, ಐಶ್ವರ್ಯಾ, ವಕೀಲ ಶಿವಕುಮಾರ್, ಸುರೇಶ್, ಶಿವಮ್ಮ, ಸುನೀಲ್ ಇದ್ದರು.  
ಹಾಸನ

ಶ್ರೀ ಶಿವಕುಮಾರ ಸ್ವಾಮೀಜಿ ಬದುಕು ಎಲ್ಲರಿಗೂ ದಾರಿ ದೀಪ

ಹೊಳೆನರಸೀಪುರ: ಸರ್ವ ಧರ್ಮಗಳ ವಿದ್ಯಾರ್ಥಿಗಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿದ ಮಹಾ ಚೇತನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಎಂದು ನಿವೃತ್ತ ಪ್ರಾಂಶುಪಾಲ ಪ್ರಭುಶಂಕರ್ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿವಕುಮಾರ ಸ್ವಾಮೀಜಿ ಅವರ ಬದುಕು ಎಲ್ಲರಿಗೂ ದಾರಿ ದೀಪವಾಗಿದೆ. ಜಾತ್ಯತೀತವಾಗಿ ಶ್ರೀ ಕ್ಷೇತ್ರದಲ್ಲಿ ನೆಲೆಸಿದ ಎಲ್ಲರಿಗೂ ವಿದ್ಯಾಭ್ಯಾಸ ಕಲಿಸಲು ಆಶ್ರಯ ನೀಡಿದರು ಎಂದರು.
ಸಿವಿಲ್ ನ್ಯಾಯಾಧೀಶರಾದ ಚೇತನಾ ಹಾಗೂ ಐಶ್ವರ್ಯಾ ಗುಡದಿನ್ನಿ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಸುರೇಶ್, ಸರ್ಕಾರಿ ಅಭಿಯೋಜಕರಾದ ಶಿವಣ್ಣ, ಸುನೀಲ್, ಶಿವಮ್ಮ ಇದ್ದರು.