ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 14 ಹಾಗೂ 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ನೆಟ್‌ಬಾಲ್ ಟೂರ್ನಿಯಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಾಂಪಿಯನ್ ಶಿಪ್ ಪಡೆದಿದ್ದಾರೆ. 
ಹಾಸನ

ಸಂತ ಜೋಸೆಫರ ಶಾಲೆ ಚಾಂಪಿಯನ್

ಲಲಾಟಾಕ್ಷ ಎಸ್
ಆಲೂರು: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 14 ಹಾಗೂ 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ನೆಟ್‌ಬಾಲ್ ಟೂರ್ನಿಯಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ಚಾಂಪಿಯನ್‌ಶಿಪ್ ಸ್ಥಾನ ಪಡೆದಿದ್ದಾರೆ.
ಆಲೂರು ತಾಲೂಕಿನ ಪಾಳ್ಯ ಹೋಬಳಿಯ ತಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡಾಕೂಟದಲ್ಲಿ ನಾಲ್ಕು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು.
ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಪ್ರಣತಿ ಎಸ್, 7ನೇ ತರಗತಿಯ ಧನಲಕ್ಷ್ಮೀ, ಕಾವ್ಯಾ, ಪ್ರಿಯಾಂಕಾ, 8ನೇ ತರಗತಿಯ ದೀಕ್ಷಾ ವೆರೊನಿಕ ಬಾಲು, 9ನೇ ತರಗತಿಯ ಲಾವಿಠ ಪ್ರೀಸ್ಸಿ, ಸಾನಿಕಾ, ಕವಿತಾ, 10ನೇ ತರಗತಿಯ ಅನುಪ್ರಿಯಾ, ಎಲಿಜಬೆತ್ ನಾಲ್ಕೂ ವಿಭಾಗಗಳಲ್ಲಿ ವಿಜೇತರಾಗಿದ್ದಾರೆ. ಅಲ್ಲದೆ, ರಾಷ್ಟ್ರ ಮಟ್ಟದ ನೆಟ್‌ಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ನೆಟ್‌ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪುರುಷೋತ್ತಮ್, ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಲಿಜೀ ಅಬ್ರಹಾಂ, ಮುಖ್ಯ ಶಿಕ್ಷಕಿ ಆಶಾಲತಾ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್, ಶಿಕ್ಷಕಿ ಪ್ರಿಯಾ ಅಭಿನಂದಿಸಿದ್ದಾರೆ.