ನುಗ್ಗೇಹಳ್ಳಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲದ ಮುಂಭಾಗ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಯೋಗೇಶ್, ದೊರೆಸ್ವಾಮಿ, ವೆಂಕಟೇಶ್, ನಾಗರಾಜ್, ಪುಟ್ಟಸ್ವಾಮಿ, ನಟರಾಜ್, ಪ್ರೀತಮ್, ಹೊನ್ನೇಶ್ ಯಾದವ್, ಪಟೇಲ್ ಕುಮಾರ್, ರಂಗಸ್ವಾಮಿ, ಸಂಪತ್ ಕುಮಾರ್, ಜಾವೇದ್ ಇತರರು ಇದ್ದರು. 
ಹಾಸನ

ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಎನ್.ಬಾಲಕೃಷ್ಣ ಭರವಸೆ
  • ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ
ನುಗ್ಗೇಹಳ್ಳಿ: ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಹಾಗೂ ಸದಾಶಿವ ಸ್ವಾಮಿ ದೇವರ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ನುಗ್ಗೇಹಳ್ಳಿ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲದ ಮುಂಭಾಗ 25 ಲಕ್ಷ ರೂ. ವೆಚ್ಚದ 400 ಮೀಟರ್ ಸಿಮೆಂಟ್ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ನುಗ್ಗೇಹಳ್ಳಿಯ ಪುರಾಣ ಪ್ರಸಿದ್ಧ ದೇಗುಲಗಳ ದರ್ಶನಕ್ಕೆ ಬರುವ ಪ್ರವಾಸಿಗರು ಹಾಗೂ ಭಕ್ತರ ಅನುಕೂಲಕ್ಕೆ ಬೆಂಗಳೂರು-ನುಗ್ಗೇಹಳ್ಳಿ ನಡುವೆ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನುಗ್ಗೇಹಳ್ಳಿ ಚೌಡೇಶ್ವರಿ ದೇಗುಲದ ಜೀರ್ಣೋದ್ಧಾರಕ್ಕೆ 1 ಲಕ್ಷದ 50 ಸಾವಿರ ರೂ.ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ಇಂಜಿನಿಯರ್ ಪ್ರೀತಮ್, ಉದ್ಯಮಿ ಭುವನಹಳ್ಳಿ ಯೋಗೇಶ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಿ.ಆರ್.ದೊರೆಸ್ವಾಮಿ, ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ್ ಯಾದವ್, ಟಿಎಪಿಸಿಎಂಎಸ್ ಅಧ್ಯಕ್ಷ ಮೆಡಿಕಲ್ ವೆಂಕಟೇಶ್, ನಿರ್ದೇಶಕ ತೋಟಿ ನಾಗರಾಜ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೆಳಗಿಹಳ್ಳಿ ಪುಟ್ಟಸ್ವಾಮಿ, ಕೃಷಿ ಪತ್ತಿನ ಸಂಘದ ಅಧ್ಯಕ್ಷ ಪಟೇಲ್ ಕುಮಾರ್, ಮುಖಂಡರಾದ ಎಚ್.ಬಿ.ರಂಗಸ್ವಾಮಿ, ಸಂಪತ್ ಕುಮಾರ್, ಶಿವಸ್ವಾಮಿ, ಬೆಟ್ಟಯ್ಯ, ಹೊನ್ನೇಗೌಡ, ಕೊಪ್ಪಲು ಮಂಜುನಾಥ ಸ್ವಾಮಿ, ಶಿವಕುಮಾರ್, ಜಾವೇದ್, ದ್ಯಾವಯ್ಯ, ಚಂದ್ರು ಯಾದವ್, ಜಗನ್ನಾಥ್, ಗೋಪಾಲ್, ಖಜಾಂಚಿ ನಾರಾಯಣ್, ನಿರ್ದೇಶಕ ರಾಜು, ಪ್ರಸನ್ನ ಕೇಶವಾಚಾರ್ಯ, ಗೋಪಿ ಇತರರು ಇದ್ದರು.