ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಂಗವಿಕಲರ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿ ಮೋಹಿದ್ದಿನ್ ಶರೀಫ್‌ಗೆ ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು.
- ಹಾನಸದ ಜಿಲ್ಲಾ ಕ್ರೀಡಾಂಗಣ
- ಅಂಗವಿಕಲ ವಿದ್ಯಾರ್ಥಿಗಳ ಕ್ರೀಡಾಕೂಟ
- ಹೊಸನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮೋಹಿದ್ದಿನ್ ಶರೀಫ್
ಬೇಲೂರು: ಹಾನಸದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂಗವಿಕಲ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಹೊಸನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮೋಹಿದ್ದಿನ್ ಶರೀಫ್ ಗುಂಡು ಹಾಗೂ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಮುಖ್ಯ ಶಿಕ್ಷಕ ಕಿರಣ್‌ಕುಮಾರ್ ತಿಳಿಸಿದರು.
ಗುಂಡು ಹಾಗೂ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಹೆಚ್ಚಿನ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ನಗದು ಬಹುಮಾನ ನೀಡಿ ಅಭಿನಂದಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ನೀಡಿ ಪ್ರೋತ್ಸಾಹಿಸಿದರೆ ಸಾಧನೆ ಮಾಡುತ್ತಾರೆ ಎಂಬುದಕ್ಕೆ ಮೋಹಿದ್ದಿನ್ ಶರೀಫ್ ಉದಾಹರಣೆ ಎಂದರು.
ಪುರಸಭೆ ಸದಸ್ಯೆ ಜಮೀಲಾ ತೌಫಿಕ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಜೀನತ್ ಉನ್ನೀಸ, ಸದಸ್ಯರಾದ ಶಾಜಿಯ, ಲಕ್ಷ್ಮಿ, ಸಹ ಶಿಕ್ಷಕಿಯರಾದ ರಮಾಮಣಿ, ಮಮತಾ ಇತರರಿದ್ದರು.