ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಸದಾಶಿವ ಶಿವಾಚಾರ್ಯ ಸ್ವಾಮೀಜಿ
ಆಲೂರು: ಗೋ ರಕ್ಷಣೆ, ಹಿಂದೂ ದೇವಾಲಯ ಉಳಿವಿಗಾಗಿ ನಿರಂತರ ಹೋರಾಟ ಮಾಡುತ್ತಾ ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಅವರನ್ನು ಏಕಾಏಕಿ ಬಂಧಿಸಿರುವುದು ಖಂಡನೀಯ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಪುನೀತ್ ಕೆರೆಹಳ್ಳಿ ಅವರು ಯುವಕರ ತಂಡ ಕಟ್ಟಿಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಹಿಂದೂ ಧರ್ಮ ಸಂರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಯಾವುದೇ ಒಂದು ಧರ್ಮ ಅಥವಾ ಜನಾಂಗದ ವಿರುದ್ಧ ಅವರು ಕೆಲಸ ಮಾಡುತ್ತಿಲ್ಲ. ಆದರೆ ಮೌಲ್ವಿಯೊಬ್ಬರಿಗೆ ನಿಂದಿಸಿದ್ದಾರೆಂಬ ಸುಳ್ಳು ಆರೋಪದಡಿ ಅವರನ್ನು ಯಾವುದೇ ನೋಟಿಸ್ ನೀಡದೆ ಬಂಧಿಸಿರುವುದು ಖಂಡನೀಯ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಬೇಕಾಗುತ್ತದೆ. ಪ್ರಕರಣದ ಸತ್ಯಾಸತ್ಯತೆ ಅರಿತು ಕ್ರಮ ಜರುಗಿಸಬೇಕು. ಕೆರೆಹಳ್ಳಿ ಮನೆಯಲ್ಲಿದ್ದಾಗ ತಂದೆ-ತಾಯಿಯ ಎದುರೇ ಪುನೀತ್ ಅವರನ್ನು ಬಂಧಿಸಿರುವುದು ಅಕ್ಷಮ್ಯ. ರಾಜ್ಯ ಸರ್ಕಾರದ ಈ ನಡೆಯನ್ನು ಖಂಡನೀಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ