ಹೊಳೆನರಸೀಪ್ಟುದ ಪುರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಚೇತನಾ ಉದ್ಘಾಟಿಸಿದರು. ಶಾಲು, ಮುನಿರಾಜು, ಶಿವಶಂಕರ್ ಇತರರು ಇದ್ದರು. 
ಹಾಸನ

ಮಹಿಳೆಯರ ಹಕ್ಕು ಸಂರಕ್ಷಣೆಗಿದೆ ಹಲವು ಕಾನೂನು

ಪ್ರಮುಖ ಮುಖ್ಯಾಂಶಗಳು

  • legal awareness
ಹೊಳೆನರಸೀಪುರ: ಮಹಿಳೆಯರ ಹಕ್ಕುಗಳಿಗೆ ಧಕ್ಕೆ ಬಾರದಂತೆ ಅದನ್ನು ಸಂರಕ್ಷಿಸುವ ದೃಷ್ಟಿಯಿಂದ ಸರ್ಕಾರ ಹಲವಾರು ಕಾನೂನನ್ನು ಜಾರಿಗೆ ತಂದಿದ್ದು, ಅವುಗಳನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶೆ ಚೇತನಾ ಸಲಹೆ ನೀಡಿದರು.
ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನ ಅಂಗವಾಗಿತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಸಹಯೋಗದಲ್ಲಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗಿಡಕ್ಕೆ ನೀರೇರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರ ಮೇಲೆ ದಬ್ಬಾಳಿಕೆ, ಅನ್ಯಾಯ, ಲೈಂಗಿಕ ಕಿರುಕುಳ, ಅತ್ಯಾಚಾರ, ಕಿಡ್ನಾಪ್, ಮಾನಸಿಕ ಹಿಂಸೆ, ಸಮಾಜದಲ್ಲಿ ಇತ್ತೀಚೆಗೆ ಮಿತಿ ಮೀರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹಿಳೆಯರಿಗೆ ಕಾನೂನಿನ ಅರಿವು ಮುಖ್ಯವಾಗಿದೆ ಎಂದು ಹೇಳಿದರು.
ಕುಟುಂಬದೊಳಗೆ ಸಮಸ್ಯೆಗಳು ಹೆಚ್ಚಾದಾಗ, ವ್ಯಕ್ತಿಗಳಿಂದ ಅವಮಾನಕ್ಕೀಡಾದಾಗ, ಶೋಷಣೆಗೊಳಗಾದಾಗ ಮತ್ತು ಮಹಿಳೆಯರ ಹಕ್ಕುಗಳನ್ನು ಕಸಿಯಲು ಪ್ರಯತ್ನಿಸಿದರೆ ಅಂತವರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು.
ಮಹಿಳೆಯರು ಸಮಾಜದಲ್ಲಿ ಜಾಗೃತರಾಗಬೇಕು. ಇಲ್ಲವಾದರೆ ಮಹಿಳೆಯರು ಸಮಸ್ಯೆಗೆ ಸಿಲುಕುವ ಸಂದರ್ಭ ಎದುರಾಗುತ್ತದೆ. ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು. ಕಾನೂನನ್ನು ದುರುಪಯೋಗ ಮಾಡಿಕೊಳ್ಳದೆ ಮಹಿಳೆಯರ ಸಂರಕ್ಷಣೆಗೆ ಕಟಿಬದ್ಧರಾಗಬೇಕು. ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ, ಮಹಿಳೆಯರ ಮೇಲಿನ ಹಕ್ಕುಗಳನ್ನು ಸಂರಕ್ಷಿಸುವ ಸಲುವಾಗಿ ಹಲವಾರು ಕಾನೂನು ಮತ್ತು ಯೋಜನೆಗಳನ್ನು ಜಾರಿಗೆ ತರುತ್ತಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಎಲ್ಲ ಇಲಾಖೆಗಳು ಇದಕ್ಕಾಗಿ ಶ್ರಮ ವಹಿಸಬೇಕು ಎಂದು ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ಕುರಿತು ತಾಪಂ ಇಒ ಜಿ.ಮುನಿರಾಜ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್ ಮಾಹಿತಿ ನೀಡಿದರು. ಕಾನೂನು ಅರಿವು-ನೆರವು ಕುರಿತು ವಕೀಲ ಕೆ.ಆರ್.ಜಯಪ್ರಕಾಶ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಎಎಸ್‌ಪಿ ಶಾಲು, ವಕೀಲರ ಸಂಘದ ಅಧ್ಯಕ್ಷ ಎಂವಿ ಶಿವಕುಮಾರ್, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್ ಮತ್ತಿತರರಿದ್ದರು.