ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ/ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತ ಸಭೆಯಲ್ಲಿ ಡಿಸಿ ಲತಾಕುಮಾರಿ ಮಾತನಾಡಿದರು. ಹೆೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಅರುಣ್ ಕುಮಾರ್, ಡಾ.ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೊಟೇಲ್ ಮಾಲೀಕರು ಇದ್ದರು. 
ಹಾಸನ

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾಗದಿರಲಿ

ಪ್ರಮುಖ ಮುಖ್ಯಾಂಶಗಳು

  • ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾಗದಿರಲಿ
  • ಕಂಪನಿ, ವಿತರಕರು, ಅಧಿಕಾರಿಗಳಿಗೆ ಡಿಸಿ ಸೂಚನೆ
  • ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ
ಹಾಸನ: ಗೃಹ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುವ ಏಜೆನ್ಸಿಗಳು ಸ್ಥಳೀಯವಾಗಿ ಯಾವುದೇ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಿ, ಗ್ರಾಹಕರೊಂದಿಗೆ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವಾಣಿಜ್ಯ/ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ವಿತರಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುಂತೆ ಸೂಚಿಸಿದರು.
ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಬುಕ್ಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರಲ್ಲದೆ ದುರ್ಬಳಕೆ ಕಂಡು ಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯತೆ ಮಾಹಿತಿಯನ್ನು ಪ್ರತಿದಿನದ ಒದಗಿಸುವಂತೆ ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಅರುಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೋಟೆಲ್ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.