ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿ ವಡ್ಡರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂತಿ ಚಿರತೆ ಸೆರೆಗೆ ಬೋನು ಇರಿಸಿರುವುದು. 
ಹಾಸನ

ಚಿರತೆ ಸೆರೆಗೆ ಬೋನು ಅಳವಡಿಕೆ

ಕಿರಣ್ ಗೌಡ.ಜಿ

ಅರಕಲಗೂಡು:

ತಾಲೂಕಿನ ರಾಮನಾಥಪುರ ಹೋಬಳಿಯ ವಡ್ಡರಹಳ್ಳಿ, ರುದ್ರಪಟ್ಟಣ, ಹನ್ಯಾಳು, ಮತ್ತಿಗೋಡು, ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಸಂಚರಿಸಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಕೆಲ ದಿನಗಳ ಹಿಂದೆ ವಡ್ಡರಹಳ್ಳಿ ಗ್ರಾಮದ ಬಳಿ ಪೊದೆಯಲ್ಲಿ ಚಿರತೆ ಅವಿತಿದ್ದನ್ನು ಸ್ಥಳೀಯರು ನೋಡಿದ್ದರು. ಎರಡು ದಿನಗಳ ಹಿಂದೆ ರುದ್ರಪಟ್ಟಣ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಿರತೆ ಅಡ್ಡಬಂದಿದೆ. ಚಿರತೆ ಕಾಣಿಸಿಕೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ವಡ್ಡರಹಳ್ಳಿ ಗ್ರಾಮದಲ್ಲಿ ನಾಯಿ ಮೇಲೆ ಚಿರತೆ ದಾಳಿ ನಡೆಸಿರುವುದು ಗ್ರಾಮದ ಸುತ್ತಮುತ್ತ ಚಿರತೆ ಸಂಚರಿಸಿರುವುದು ದೃಢಪಟ್ಟಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ವಡ್ಡರಹಳ್ಳಿ ಗ್ರಾಮದಲ್ಲಿ ಬೋನು ಅಳವಡಿಸಿದ್ದು, ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ. ಗ್ರಾಮಸ್ಥರು ಮುಂಜಾನೆ ಹಾಗೂ ರಾತ್ರಿ ವೇಳೆ ಒಂಟಿಯಾಗಿ ಸಂಚರಿಸದಂತೆ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಕಟ್ಟಿ ಹಾಕುವಂತೆ ಅರಣ್ಯಾಧಿಕಾರಿ ಮಹೇಶ್ ತಿಳಿಸಿದ್ದಾರೆ.