ಅರಕಲಗೂಡು ತಾಲೂಕಿನ ಕೊಣನೂರಿಲ್ಲಿ ಆಯೋಜಿಸಿದ್ದ ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶಿಸಿದರು.  
ಹಾಸನ

ಪ್ರತಿಭೆಯನ್ನು ಬೆಳಕಿಗೆ ತರಲು ಪ್ರಯತ್ನಿಸಿ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ. ಮಂಜು ಕಿವಿಮಾತು
ಅರಕಲಗೂಡು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಬೆಳಕಿಗೆ ತರಲು ಪ್ರಯತ್ನಿಸಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು.
ತಾಲೂಕಿನ ಕೊಣನೂರು ಪ್ರೌಢಶಾಲಾ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಲ್ಲಿ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಇದನ್ನು ಹೊರತರಲು ಒಂದೇ ವೇದಿಕೆಯಡಿ ಒಗ್ಗೊಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪಾಲಕರು ಹೆಚ್ಚಿನ ಗಮನ ಹರಿಸಬೇಕಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ, ಗ್ರಾಪಂ ಅಧ್ಯಕ್ಷ ನಾಗರಾಜು, ತಾಲೂಕು ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜು ಇತರರಿದ್ದರು. ವಿವಿಧ ಶಾಲೆಯ ವಿದ್ಯಾರ್ಥಿಗಳು ಮಣ್ಣಿನಿಂದ ಮಾಡಿದ ಪ್ರಾಣಿಗಳ ಮಾದರಿಗಳು, ಚಿತ್ರಕಲೆ, ನೃತ್ಯ, ಹಾಡಿಗಾರಿಕೆ, ಏಕಪಾತ್ರ ಅಭಿನಯ ಆಕರ್ಷಕವಾಗಿತ್ತು.