ರಾಮನಾಥಪುರ ಹೋಬಳಿ ಕೇರಳಾಪುರ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಅದ್ದೂರಿಯಾಗಿ ಗುರುವಾರ ನಡೆಯಿತು. 
ಹಾಸನ

ವೀರಭದ್ರಸ್ವಾಮಿ ಅದ್ದೂರಿ ರಥೋತ್ಸವ

ಪ್ರಮುಖ ಮುಖ್ಯಾಂಶಗಳು

  • ಕೇರಳಾಪುರ ಶ್ರೀ ವೀರಭದ್ರಸ್ವಾಮಿ ರಥೋತ್ಸವ
ಅರಕಲಗೂಡು: ರಾಮನಾಥಪುರ ಹೋಬಳಿ ಕೇರಳಾಪುರ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಅದ್ದೂರಿಯಾಗಿ ಗುರುವಾರ ನಡೆಯಿತು.
ರಥೋತ್ಸವದ ಅಂಗವಾಗಿ ದೇಗುಲವನ್ನು ವಿವಿಧ ರೀತಿಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ವಿವಿಧ ಪುಷ್ಪ ಹಾಗೂ ಬಗೆ ಬಗೆಯ ವರ್ಣದ ಬಟ್ಟೆಗಳಿಂದ ಅಲಂಕರಿಸಿದ್ದ 25 ಅಡಿ ಎತ್ತರದ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಕೇರಳಾಪುರದ ಶ್ರೀ ಪ್ರಸನ್ನ ವೀರಭದ್ರೇಶ್ವರಸ್ವಾಮಿ ಮಹಾ ರಥೋತ್ಸವಕ್ಕೆ ಎ. ಮಂಜು, ತಹಸೀಲ್ದಾರ್ ಕೆ.ಸಿ.ಸೌಮ್ಯಾ ಚಾಲನೆ ನೀಡಿದರು. ದೇಗುಲದ ಆವರಣದಲ್ಲಿ ಕಿಕ್ಕಿರಿದು ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸ್ವಾಮಿಗೆ ಜೈಕಾರ ಹಾಕುತ್ತಾ ದೇಗುಲ ಮುಂಭಾಗದಿಂದ ರಥದ ಬೀದಿಯಲ್ಲಿ ರಥ ಎಳೆದ ಭಕ್ತರು ದೇವಾಲಯದ ಸುತ್ತ ಪ್ರದಕ್ಷಣೆ ಹಾಕಿ ಮತ್ತೆ ಸ್ವಸ್ಥಾನಕ್ಕೆ ರಥ ಎಳೆದು ತಂದು ನಿಲ್ಲಿಸಿದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.