ಹಾಸನ ತಾಲೂಕಿನ ವಿವಿಧಡೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಕಾನೂನು ಬಾಹಿರ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 
ಹಾಸನ

ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ
  • ನೂನುಬಾಹಿರ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯ
ಹಾಸನ: ತಾಲೂಕಿನ ವಿವಿಧಡೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಜನರಿಗಾಗುತ್ತಿರುವ ತೊಂದರೆ ಹಾಗೂ ಕಾನೂನುಬಾಹಿರ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಂತಿ ಗ್ರಾಮ ಹೋಬಳಿ ವ್ಯಾಪ್ತಿಯ ಚಿಗಳ್ಳಿ, ಅಂಕನಹಳ್ಳಿ ಗ್ರಾಮಗಳಲ್ಲಿ ಕಲ್ಲು ಗಣಿಗಾರಿಕೆ ಹಾಗೂ ಕಲ್ಲುಪುಡಿ ಮಾಡುವ ಸ್ಟೋನ್ ಕ್ರಷರ್‌ಗಳು ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇದರ ಬಗ್ಗೆ ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನಿಯಮ ಉಲ್ಲಂಸಿ ಕ್ರಷರ್ ನಡೆಯುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತಾವು ಕೊಡ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ, ಭರವಸೆ ಬಿಟ್ಟರೆ ಏನೂ ಆಗಿಲ್ಲ. ಇನ್ನಾದರೂ ಕೂಡಲೇ ಈ ಬಗ್ಗೆ ಗಮನಹರಿಸಿ ಕ್ರಶರ್‌ಗಳನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸುನಿಲ್, ರಮೇಶ್, ಮಲ್ಲೇಶ್, ಯೋಗೇಶ್, ವರದರಾಜು, ಯೋಗೇಶ್ ಇದ್ದರು.