ಛಲವಾದಿ ನಾರಾಯಣಸ್ವಾಮಿ 
ಹಾಸನ

ತ.ನಾಡಿಗೆ ಕಾವೇರಿ ನೀರು ಹರಿಸಿದರೆ ಉಗ್ರ ಹೋರಾಟ

ಪ್ರಮುಖ ಮುಖ್ಯಾಂಶಗಳು

  • ತ.ನಾಡಿಗೆ ಕಾವೇರಿ ನೀರು ಹರಿಸಿದರೆ ಉಗ್ರ ಹೋರಾಟ
  • ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ
ಹಾಸನ: ತೀವ್ರ ವಿರೋಧದ ನಡುವೆಯೂ ತಮಿಳುನಾಡಿಗೆ ರಾತ್ರೋರಾತ್ರಿ ಕಾವೇರಿ ನೀರು ಹರಿಸಿದರೆ ದೋಸ್ತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸೇರಿ ಉಗ್ರ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದರು.
ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿ ಗುರುವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಿಡಬ್ಲ್ಯುಆರ್‌ಸಿ ಆದೇಶಕ್ಕೆ ಯಾವುದೇ ಕಾರಣಕ್ಕೂ ಮಣಿಯಬಾರದು. ರಾಜ್ಯದಲ್ಲಿರುವ ಬರಗಾಲ, ನೀರಿನ ಸ್ಥಿತಿಗತಿ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕಸರತ್ತಿನ ಬಗ್ಗೆ ಲೇವಡಿ ಮಾಡಿದ ನಾರಾಯಣಸ್ವಾಮಿ, ಕಾಂಗ್ರೆಸ್ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ಹೈಕಮಾಂಡ್‌ಗೆ ಕರ್ನಾಟಕ ಒಂದು ರೀತಿಯಲ್ಲಿ ಎಂಟಿಎಂನಂತಾಗಿದೆ. ಯಾರು ಸೂಟ್‌ಕೇಸ್ ಕೊಡುತ್ತಾರೋ ಅವರಿಗೆ ನಿರಾಯಾಸವಾಗಿ ಮಂತ್ರಿಸ್ಥಾನ ಸಿಗುತ್ತಿದೆ. ಯಾವ ಶಾಸಕರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೋ ಅವರಿಗೆ ಮಾತ್ರ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂದು ಗೇಲಿ ಮಾಡಿದರು.