ಕೆರೆಯಲ್ಲಿ ಮುಳುಗಿರುವ ವ್ಯಕ್ತಿಯ ಶೋಧ ಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ಠಾಣೆ ಸಿಬ್ಬಂದಿ. 
ಹಾಸನ

ಕೆರೆಯಲ್ಲಿ ಈಜಲು ಹೋಗಿ ನಾಪತ್ತೆ

ಪ್ರಮುಖ ಮುಖ್ಯಾಂಶಗಳು

  • swimming
ಗಂಡಸಿ: ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀದೊಡ್ಡಮ್ಮ, ಶ್ರೀಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಆಟಿಕೆಗಳನ್ನು ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಕೆರೆಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ.
ಜಾತ್ರೆ ಹಿನ್ನೆಲೆಯಲ್ಲಿ ತನ್ನ ತಂಗಿ ಸುಪ್ರಿಯಾ ಮತ್ತು ಅವರ ಮಕ್ಕಳೊಂದಿಗೆ ಬಂದಿದ್ದ ಮೈಸೂರಿನ ಸಂತೋಷ್ (28) ಭಾನುವಾರ ಮಧ್ಯಾಹ್ನ ಇಲ್ಲಿನ ಹೆಗ್ಗಟ್ಟ ಕೆರೆಗೆ ಸ್ನಾನ ಮಾಡಲು ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜುತ್ತಾ ಮಧ್ಯ ಭಾಗಕ್ಕೆ ಹೋದವರು ಮತ್ತೆ ಮೇಲೆ ಕಾಣಿಸಿಲ್ಲ. ಇದರಿಂದ ಆತಂಕಗೊಂಡ ಸಹೋದರಿ ತಕ್ಷಣ ಸ್ಥಳೀಯರಿಗೆ ಮಾಹಿತಿ ತಿಳಿಸಿದ್ದಾರೆ.
ವಿಷಯ ತಿಳಿದ ಗಂಡಸಿ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೂ ಕಾರ್ಯಾಚರಣೆ ನಡೆಸಲಾಗಿದ್ದು ಸಂತೋಷ್ ಪತ್ತೆಯಾಗಿಲ್ಲ. ಸೋಮವಾರ ಬೆಳಗ್ಗೆಯಿಂದ ಮತ್ತೆ ಕಾರ್ಯಾಚರಣೆ ಆರಂಭವಾಗಿ ಸಂಜೆ 6 ಗಂಟೆಯವರೆಗೂ ಶೋಧಕಾರ್ಯ ನಡೆದಿದೆ. ಪತ್ತೆಯಾಗದ ಕಾರಣ ಮಂಗಳವಾರ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.